ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟದ ಶಿಕ್ಷಣ ನೀಡಿ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸುವ ಶಿಕ್ಷಕರ ಹೆಸರು ವಿದ್ಯಾರ್ಥಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆಯಲಿದೆ ಎಂದು ಕೆ.ಆರ್.ನಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಾಜಿ ನಿರ್ದೇಶಕಿ ರೇಣುಕ ಧರ್ಮರಾಜ್ ಹೇಳಿದರು.
ಸಾಲಿಗ್ರಾಮ ತಾಲೂಕಿನ ಹಳಿಯೂರು ಸರ್ಕಾರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಕೆ.ಸಿ.ಶೋಭಾವತಿ ಅವರಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಜ್ಞಾನಾರ್ಜನೆಯಲ್ಲಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಹಾಗೂ ಸುಶಿಕ್ಷಿತ ಸಮಾಜ ನಿರ್ಮಾಣದ ಜವಾಬ್ದಾರಿ ಹಾಗೂ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಕರು ಕಠಿಣ ಪರಿಶ್ರಮದಿಂದ, ಪ್ರಾಮಾಣಿಕತೆಯಿಂದ ವಿದ್ಯಾದಾನ ಮಾಡಬೇಕು ಈ ನಿಟ್ಟಿನಲ್ಲಿ ವೃತ್ತಿ ಜೀವನದಲ್ಲಿ ಶಿಕ್ಷಣ ನೀಡಿದ ಶೋಭಾವತಿ ಅವರ ನಿವೃತ್ತಿ ಜೀವನ ಸುಖರವಾಗಿರಲಿ ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತಿಯಾದ ಬಿಸಿಯೂಟ ತಯಾರಕರಾದ ರಾಣಮ್ಮ ಅವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಚೇತನ್, ಶಿಕ್ಷಕ ಜಗದೀಶ್, ಅತಿಥಿ ಶಿಕ್ಷಕರಾದ ಸ್ವಾಮಿ, ಸಂಜನಾ, ಅಡುಗೆ ಸಿಬ್ಬಂದಿ ಜ್ಯೋತಿ ಸೇರಿದಂತೆ ಮತ್ತಿತರರು ಹಾಜರಿದ್ದರು.