Thursday, April 3, 2025
Google search engine

Homeಕ್ರೀಡೆಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ

ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ

ಚಾಂಪಿಯನ್ಸ್ ಟ್ರೋಫಿ 2025 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಬುಧವಾರ (ಫೆ.19) ಶುರುವಾಗಲಿರುವ ಈ ಟೂರ್ನಿಯು ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿದ್ದು, ಟೀಮ್ ಇಂಡಿಯಾ ಫೆಬ್ರವರಿ 20 ರಿಂದ ಅಭಿಯಾನ ಆರಂಭಿಸಲಿದೆ.

ಫೆಬ್ರವರಿ 20 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ. ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾದ ಎದುರಾಳಿ ಬಾಂಗ್ಲಾದೇಶ್ ತಂಡ. ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ ತಂಡದ 2ನೇ ಎದುರಾಳಿ ಪಾಕಿಸ್ತಾನ್. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ಈ ಪಂದ್ಯ ಕೂಡ ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿದೆ.

ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ. ಅಂದರೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳನ್ನು ದುಬೈನಲ್ಲೇ ಆಡಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಸೆಮಿಫೈನಲ್ ಮತ್ತು ಫೈನಲ್​ಗೇರಿದರೆ ಮತ್ತೆರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

RELATED ARTICLES
- Advertisment -
Google search engine

Most Popular