Friday, April 4, 2025
Google search engine

Homeಕ್ರೀಡೆಟೀಂ ಇಂಡಿಯಾದ ಶ್ರೀಲಂಕಾ ಪ್ರವಾಸ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಟೀಂ ಇಂಡಿಯಾದ ಶ್ರೀಲಂಕಾ ಪ್ರವಾಸ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಪ್ರಸ್ತುತ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಐದು ಟಿ20 ಪಂದ್ಯಗಳು ನಡೆಯಲ್ಲಿದ್ದು, ಈಗಾಗಲೇ 3 ಪಂದ್ಯಗಳು ಮುಗಿದಿವೆ. ಇದರಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಜಿಂಬಾಬ್ವೆ ಬಳಿಕ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಭಾರತ ತಂಡ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈ ಪ್ರವಾಸದಲ್ಲಿ ಆಡಲಿದೆ.

ವೇಳಾಪಟ್ಟಿ ಇಂತಿದೆ:

ಜುಲೈ 26ರಿಂದ ಭಾರತದ ಶ್ರೀಲಂಕಾ ಪ್ರವಾಸ ಆರಂಭವಾಗಲಿದೆ. ಮೊದಲು ಟಿ20 ಸರಣಿ ನಡೆಯಲಿದೆ. ಇದಾದ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಜುಲೈ 26 ರಂದು ಪಲ್ಲೆಕೆಲೆಯಲ್ಲಿ ನಡೆಯಲಿದೆ. ಎರಡನೇ ಟಿ20 ಜುಲೈ 27 ರಂದು ಮತ್ತು ಮೂರನೇ ಪಂದ್ಯ ಜುಲೈ 29 ರಂದು ನಡೆಯಲಿದೆ.

ಟಿ20 ಸರಣಿಯ ಎಲ್ಲಾ ಮೂರು ಪಂದ್ಯಗಳು ರಾತ್ರಿ 7 ಗಂಟೆಗೆ ಆರಂಭವಾಗಲಿದ್ದು, ಏಕದಿನ ಸರಣಿಯ ಮೊದಲ ಪಂದ್ಯ ಆಗಸ್ಟ್ 1 ರಂದು ನಡೆಯಲಿದೆ. ಎರಡನೇ ಪಂದ್ಯ ಆಗಸ್ಟ್ 4 ರಂದು ಮತ್ತು ಮೂರನೇ ಪಂದ್ಯ ಆಗಸ್ಟ್ 7 ರಂದು ನಡೆಯಲಿದೆ. ಈ ಮೂರು ಪಂದ್ಯಗಳು ಮಧ್ಯಾಹ್ನ 2:30ಕ್ಕೆ ಆರಂಭವಾಗಲಿವೆ.

RELATED ARTICLES
- Advertisment -
Google search engine

Most Popular