Thursday, April 17, 2025
Google search engine

Homeಸಿನಿಮಾಬಹುನಿರೀಕ್ಷಿತ ‘ಸಲಾರ್’ ಸಿನಿಮಾದ ಟೀಸರ್ ರಿಲೀಸ್

ಬಹುನಿರೀಕ್ಷಿತ ‘ಸಲಾರ್’ ಸಿನಿಮಾದ ಟೀಸರ್ ರಿಲೀಸ್

ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದ ‘ಸಲಾರ್’ ಚಿತ್ರದ ಅದ್ಧೂರಿ ಟೀಸರ್ ಇಂದು ಬೆಳಗ್ಗೆ ರಿಲೀಸ್ ಆಗಿದೆ.

ಹೊಂಬಾಳೆ ನಿರ್ಮಾಣದಲ್ಲಿ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ನಟ ಪ್ರಭಾಸ್ ಅಭಿನಯಿಸಿರುವ ಸಿನಿಮಾದ ಟೀಸರ್ ಅದ್ಧೂರಿಯಾಗಿದೆ. ಸಲಾರ್ ಚಿತ್ರ ಎರಡು ಭಾಗಗಳಲ್ಲಿ ರಿಲೀಸ್ ಆಗಲಿದೆ ಎಂಬುದನ್ನೂ ಕೂಡ ಟೀಸರ್ ನಲ್ಲಿ ಚಿತ್ರ ತಂಡ ಹೇಳಿದೆ. 

ಸದ್ಯ ರಿಲೀಸ್ ಆಗಿರುವ ಟೀಸರ್ ನೋಡಿದ ಜನರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಟೀಸರ್ ನಲ್ಲಿ ಪ್ರಭಾಸ್ ಮಾಸ್‌ ಲುಕ್‌ ನಲ್ಲಿ ಕಣಿಸಿಕೊಂಡಿದ್ದಾರೆ, ಕಳೆದ ಎರಡು ವರ್ಷಗಳಿಂದ ಚಿತ್ರತಂಡದವರು ಚಿತ್ರೀಕರಣ ಮಾಡುತ್ತಿದ್ದರೂ, ಚಿತ್ರದ ಬಗ್ಗೆ ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ. ಹಾಗಾಗಿ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದ್ದು ಚಿತ್ರವನ್ನು ವೀಕ್ಷಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ.

‘ಸಲಾರ್’ ಚಿತ್ರವನ್ನು ಹೊಂಬಾಳೆ ನಿರ್ಮಾಣ ಮಾಡಿದ್ದು, ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ. ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಪ್ರಮೋದ್ ಮುಂತಾದವರ ತಾರಾಬಳಗದಲ್ಲಿದ್ದಾರೆ. ಕನ್ನಡದ ಭುವನ್ ಗೌಡ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ. ವರ್ಷದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಸೆಪ್ಟೆಂಬರ್ 28ರಂದು ಬಿಡುಗಡೆಯಾಗಲಿದೆ.

RELATED ARTICLES
- Advertisment -
Google search engine

Most Popular