ನವದೆಹಲಿ: ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳವಾರ ಮುಂಜಾನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ಏರ್ ಇಂಡಿಯಾ ವಿಮಾನ AI180 ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ವೇಳಾಪಟ್ಟಿಯ ಪ್ರಕಾರ ಹೊರಟಿತು. ಆದಾಗ್ಯೂ, ಅದು ಬೆಳಗ್ಗೆ 12:45 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಎಡ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು.
ನಾಲ್ಕು ಗಂಟೆಗಳಿಗೂ ಹೆಚ್ಚು ಸಮಯದ ನಂತರ, ಬೆಳಗ್ಗೆ 5:20 ಕ್ಕೆ, ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಯುವಂತೆ ಪ್ರಕಟಣೆ ಹೊರಡಿಸಲಾಯಿತು. ವಿಮಾನ ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕ್ಯಾಪ್ಟನ್ ಪ್ರಯಾಣಿಕರಿಗೆ ತಿಳಿಸಿದರು.
ಇದಕ್ಕೂ ಮುನ್ನ, ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ AI-171 ವಿಮಾನ, ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್‌ಗೆ ಅಪ್ಪಳಿಸಿ, 270 ಜನರ ಪ್ರಾಣ ಹರಣವಾಗಿತ್ತು. ಐದು ದಿನಗಳ ಬಳಿಕ ಮತ್ತೊಂದು ತಾಂತ್ರಿಕ ದೋಷದ ಘಟನೆ ಆತಂಕ ಉಂಟುಮಾಡಿದೆ.