Tuesday, April 8, 2025
Google search engine

HomeUncategorizedರಾಷ್ಟ್ರೀಯಐರನ್ ಮ್ಯಾನ್ 70.3 ರೇಸ್‌ ನಲ್ಲಿ ಜಯಿಸಿದ ದೇಶದ ಮೊದಲ ಜನಪ್ರತಿನಿಧಿ ತೇಜಸ್ವಿ ಸೂರ್ಯ

ಐರನ್ ಮ್ಯಾನ್ 70.3 ರೇಸ್‌ ನಲ್ಲಿ ಜಯಿಸಿದ ದೇಶದ ಮೊದಲ ಜನಪ್ರತಿನಿಧಿ ತೇಜಸ್ವಿ ಸೂರ್ಯ

ಪಣಜಿ (ಗೋವಾ): ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ಜರುಗಿದ ಐರನ್‌ಮ್ಯಾನ್ 70.3 ಚಾಲೆಂಜ್ ರೇಸ್​ ಜಯಿಸಿದ ದೇಶದ ಮೊದಲ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ರೇಸ್​ನ 2 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್ ಮತ್ತು 21 ಕಿ.ಮೀ ಓಟ ಸೇರಿ ಮೂರು ವಿಭಾಗಗಳಲ್ಲಿ ಅವರು ಭಾಗವಹಿಸಿದ್ದರು.

ಸಂಸದರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದು, ತೇಜಸ್ವಿ ಸೂರ್ಯ 8 ಗಂಟೆ, 27 ನಿಮಿಷ 32 ಸೆಕೆಂಡುಗಳಲ್ಲಿ ಸ್ಪರ್ಧೆಯ ಮೂರು ವಿಭಾಗಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಐರನ್‌ ಮ್ಯಾನ್ 70.3 ಗೋವಾದ ನಾಲ್ಕನೇ ಆವೃತ್ತಿಯನ್ನು ರೇಸ್​ನ ರಾಯಭಾರಿ ಮತ್ತು ಟೆನಿಸ್ ದಂತಕಥೆ ಲಿಯಾಂಡರ್ ಪೇಸ್, ​​ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ಸಂಸ್ಥಾಪಕ ಮತ್ತು ಸಿಇಒ ಯೋಸ್ಕಾ ಮತ್ತು ಐರನ್‌ಮ್ಯಾನ್ 70.3 ಗೋವಾ ರೇಸ್ ನಿರ್ದೇಶಕ ದೀಪಕ್​ ರಾಜ್​, ಹರ್ಬಲೈಫ್ ಇಂಡಿಯಾದ ಮಾರ್ಕೆಟಿಂಗ್ ನಿರ್ದೇಶಕ ಗಣೇಶನ್ ವಿ.ಎಸ್. ಅವರು ಭಾನುವಾರ ಮಿರಾಮರ್ ಬೀಚ್‌ ನಲ್ಲಿ ಚಾಲನೆ ನೀಡಿದರು.

ಪ್ರಧಾನಿ ಮೋದಿ ಶ್ಲಾಘನೆ

ಈ ಸಾಧನೆಗಾಗಿ ತೇಜಸ್ವಿ ಸೂರ್ಯ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಶ್ಲಾಘನೀಯ ಸಾಧನೆ! ಇದು ಅನೇಕ ಯುವಕರಿಗೆ ಫಿಟ್‌ನೆಸ್ ಸಂಬಂಧಿತ ಚಟುವಟಿಕೆಯಲ್ಲಿ ಭಾಗವಹಿಸಲು ಪ್ರೇರೇಪಣೆ ಎಂದು ನನಗೆ ಖಾತ್ರಿಯಿದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಫಿಟ್ ಇಂಡಿಯಾವು ಸ್ಫೂರ್ತಿ

ತಮ್ಮ ಸಾಧನೆಯ ಬಗ್ಗೆ ಸೂರ್ಯ ಸಂತಸ ವ್ಯಕ್ತಪಡಿಸಿದ್ದು, ಸ್ಪರ್ಧೆಗೆ ಕಟ್ಟುನಿಟ್ಟಿನ ತಯಾರಿ ನಡೆಸಿರುವುದಾಗಿ ತಿಳಿಸಿದ್ದಾರೆ. “ಐರನ್‌ಮ್ಯಾನ್ 70.3 ಗೋವಾ, 50ಕ್ಕೂ ಹೆಚ್ಚು ದೇಶಗಳ ಅಥ್ಲೀಟ್‌ಗಳನ್ನು ಆಕರ್ಷಿಸುತ್ತ ಹೆಸರುವಾಸಿಯಾಗಿದೆ. ಭಾರತ ಮತ್ತು ಪ್ರಪಂಚದಾದ್ಯಂತದ ಫಿಟ್‌ನೆಸ್ ಉತ್ಸಾಹಿಗಳಿಗೆ ಒಂದು ಪ್ರಮುಖ ವೇದಿಕೆಯಾಗಿದೆ. ಸವಾಲೆಂಬುದು ಸಹಿಷ್ಣುತೆ, ದೈಹಿಕ ಮತ್ತು ಮಾನಸಿಕ ಸದೃಢತೆಯ ಅಂತಿಮ ಪರೀಕ್ಷೆಯಾಗಿದೆ. ಕಳೆದ 4 ತಿಂಗಳುಗಳಲ್ಲಿ, ನನ್ನ ಫಿಟ್‌ನೆಸ್ ಸುಧಾರಣೆಗೆ ನಾನು ಕಠಿಣ ತರಬೇತಿ ಪಡೆದಿದ್ದೇನೆ. ಈ ಸವಾಲನ್ನು ಪೂರ್ಣಗೊಳಿಸಿದ್ದಕ್ಕಾಗಿ ಸಂತೋಷವಾಗಿದೆ. ಪ್ರಧಾನಿ ಮೋದಿಯವರು ಆರಂಭಿಸಿದ ಫಿಟ್ ಇಂಡಿಯಾವು ನನಗೆ ಸ್ಫೂರ್ತಿಯಾಗಿದೆ. ಅದು ನನ್ನ ಫಿಟ್‌ನೆಸ್ ಗುರಿ ತಲುಪಲು ನೆರವಾಯಿತು” ಎಂದು ಸೂರ್ಯ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular