Friday, April 11, 2025
Google search engine

Homeರಾಜ್ಯಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್ : ಪತ್ನಿ ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್ : ಪತ್ನಿ ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಒಂದು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾಣಿಯ, ನಿಖಿತಾ ತಾಯಿ ನಿಶಾ ಹಾಗೂ ಅನುರಾಗ್ ಗೆ ಬೆಂಗಳೂರಿನ 29ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ನೀಡಿ ಆದೇಶಿಸಿದೆ.

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪತ್ನಿ ನಿಕಿತಾ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು ನೀಡಿ ಆದೇಶಸಿದೆ. ಬೆಂಗಳೂರಿನ 29ನೇ ಸಿಸಿಎಚ್ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಪತ್ನಿ ನಿಖಿತ ಸಿಂಘಾಣಿಯ ನಿಶಾ ಹಾಗೂ ಸಹೋದರ ಅನುರಾಗ ಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.

ಪತ್ನಿ ಹಾಗೂ ಆಕೆಯ ಮನೆಯವರು ಕಿರುಕುಳ ನೀಡಿರುವುದಾಗಿ ಆರೋಪಿಸಿ ಸುದೀರ್ಘ ಡೆತ್ ನೋಟ್ ಬರೆದು ಡಿಸೆಂಬರ್‌ 9ರಂದು ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನೆಕೊಳಲಿನಲ್ಲಿದ್ದ ಮನೆಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಮೊಬೈಲ್‌ನಲ್ಲಿ ಮಾಡಿಕೊಂಡಿದ್ದ ವಿಡಿಯೊ ವೈರಲ್ ಆಗುತ್ತಿದ್ದಂತೆ ರಾಷ್ಟ್ರದೆಲ್ಲೆಡೆ ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 108ರ ಅಡಿ ಆತ್ಮಹತ್ಯೆಗೆ ಪ್ರಚೋದನೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಡಿಸೆಂಬರ್‌ 20ರಂದು ನಿಖಿತಾಳನ್ನು ಹರಿಯಾಣದ ಗುರುಗ್ರಾಮ ಹಾಗೂ ತಾಯಿ ಮತ್ತು ಸಹೋದರನನ್ನು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಹೋಟೆಲ್‌ವೊಂದರಲ್ಲಿ ಬಂಧಿಸಿದ್ದರು. ಸದ್ಯ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

RELATED ARTICLES
- Advertisment -
Google search engine

Most Popular