ಪುದುಚೇರಿ: ತೆಲಂಗಾಣ ರಾಜ್ಯಪಾಲೆ ಹಾಗೂ ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ತಮಿಳ್‌ಸೆಲ್ವಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸೌಂದರರಾಜನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳಿಸಿಕೊಟ್ಟಿದ್ದಾರೆ ಎಂದು ರಾಜಭವನದ ವರದಿಗಳು ತಿಳಿಸಿವೆ. ಸೌಂದರಿರಾಜನ್ ಅವರ ರಾಜೀನಾಮೆ ತಮಿಳುನಾಡು ಹಾಗೂ ಪುದಿಚೆರಿಯ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡು ದಿನ ಬಾಕಿಯಿರುವ ಸಂದರ್ಭದಲ್ಲಿಯೇ ರಾಜೀನಾಮೆ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.
ತಮಿಳ್‌ಸೆಲ್ವಿ ಸೌಂದರರಾಜನ್ ಅವರು ಈ ಹಿಂದೆ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.