ಬೆಂಗಳೂರು: ಮುಡಾ ಹಗರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದಂತ ಬಿ-ರಿಪೋರ್ಟ್ ಪ್ರಶ್ನಿಸಿದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಲೋಕಾಯುಕ್ತದಿಂದ ಸಲ್ಲಿಸಿರುವಂತ ಬಿ-ರಿಪೋರ್ಟ್ ಬಗ್ಗೆ ಆದೇಶವನ್ನು ಸದ್ಯಕ್ಕೆ ನೀಡುವುದಿಲ್ಲ. ತನಿಖೆ ಮುಂದುವರೆಯಲಿ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಮುಡಾ ಕೇಸಲ್ಲಿ ತಾತ್ಕಾಲಿಕ ರಿಲೀಫ್ ನೀಡಿದ್ದಾರೆ.
ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಲೋಕಾಯುಕ್ತದ ಬಿ-ರಿಪೋರ್ಟ್ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಅವರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಸಲಾಯಿತು.
ತನ್ನ ಅರ್ಜಿಯ ಪರವಾಗಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ತಾನೇ ವಾದಿಸಿದ್ದರು. ವಾದ-ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಬಗ್ಗೆ ಆದೇಶ ಸದ್ಯಕ್ಕೆ ಇಲ್ಲ. ತನಿಖೆ ಮುಂದುವರೆಸುವಂತೆ ಸೂಚಿಸಿ ಆದೇಶಿಸಿದ್ದಾರೆ. ಅಲ್ಲದೇ ಿಡಿ ಕೂಡ ತಕರಾರು ಅರ್ಜಿ ಸಲ್ಲಿಸಬಹುದೆಂದು ತೀರ್ಪು ನೀಡಿದ್ದಾರೆ.