ಬೆಂಗಳೂರು: ಮುಡಾ ಹಗರಣ ಸಂಬಂಧ ಸಚಿವ ಬೈರತಿ ಸುರೇಶ್ ಹಾಗೂ ಸಿಎಂ ಪತ್ನಿ ಪಾರ್ವತಿಯವರಿಗೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರು. ಈ ಸಮನ್ಸ್ ಗೆ ಹೈಕೋರ್ಟ್ ಫೆಬ್ರವರಿ 20ರವರೆಗೆ ತಡೆಯಾಜ್ಞೆ ವಿಸ್ತರಿಸಿ ಆದೇಶಿಸಿದೆ.
ಇಂದು ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಇಡಿ ಸಮನ್ಸ್ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠವು ನಡೆಸಿತು. ವಾದ ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ಫೆಬ್ರವರಿ 20ಕ್ಕೆ ವಿಚಾರಣೆ ನಿಗದಿ ಪಡಿಸಿದೆ. ಅಲ್ಲದೇ ಅಲ್ಲಿಯವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಸಿಎಂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ.