Friday, April 18, 2025
Google search engine

Homeಅಪರಾಧಕಾನೂನುಸಿಎಂಗೆ ತಾತ್ಕಾಲಿಕ ರಿಲೀಫ್: ಸೆ.೨ಕ್ಕೆ ಅರ್ಜಿ ವಿಚಾರಣೆ

ಸಿಎಂಗೆ ತಾತ್ಕಾಲಿಕ ರಿಲೀಫ್: ಸೆ.೨ಕ್ಕೆ ಅರ್ಜಿ ವಿಚಾರಣೆ

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.೨ಕ್ಕೆ ಮುಂದೂಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ.

ಇಂದು ಶನಿವಾರ ಸಿಎಂ ಸಿದ್ಧರಾಮಯ್ಯ ಅವರು ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.

ದೂರುದಾರ ಪ್ರದೀಪ್ ಕುಮಾರ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾದವಗಿ ಅವರು ಆರೋಪಿಗಳಿಗೆ ನೋಟಿಸ್ ನೀಡಿ ತನಿಖೆಗೆ ಅವಕಾಶ ನೀಡಬಾರದು. ನೋಟಿಸ್ ನೀಡಿದರೇ ತನಿಖೆಯೇ ಪೂರ್ವಗ್ರಾಹಕ್ಕೊಳಗಾಗಲಿದೆ. ೧೭ಎ ಹಂತದಲ್ಲಿ ರಾಜ್ಯಪಾಲರ ಕ್ರಮ ಪ್ರಶ್ನಿಸಲು ಅವಕಾಶವಿಲ್ಲ. ಎಫ್‌ಐಆರ್ ದಾಖಲಾದ ಬಳಿಕವಷಅಟೇ ಆರೋಪಿಗೆ ಅದನ್ನು ಪ್ರಶ್ನಿಸುವ ಹಕ್ಕು ಬರಲಿದೆ ಎಂದು ವಾದಿಸಿದರು.ಸಂವಿಧಾನದ ೧೬೩ರಡಿ ಸಿಎಂ ಕೂಡ ಕ್ಯಾಬಿನೆಟ್ ಭಾಗವಾಗಿದ್ದಾರೆ. ಹೀಗಾಗಿ ಸಿಎಂ ಹೊರತಾದ ಕ್ಯಾಬಿನೆಟ್ ಇರಲು ಸಾಧ್ಯವಿಲ್ಲ. ಹೀಗಾಗಿ ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಪರಿಗಣಿಸಬೇಕಿಲ್ಲ.

ಈ ಬಳಿಕ ಟಿಜೆ ಅಬ್ರಾಹಂ ಪರ ವಕೀಲ ರಂಗನಾಥ್, ಮುಡಾ ಸೈಟ್ ಹಂಚಿಕೆಗಾಗಿ ಡಿನೋಟಿಫಿಕೇಷನ್ ಆದಾಗ ಸಿದ್ಧರಾಮಯ್ಯ ಅವರು ಡಿಸಿಎಂ ಆಗಿದ್ದರು. ಭೂ ಪರಿವರ್ತನೆ ಆದಾಗಲೂ ಸಿದ್ಧರಾಮಯ್ಯ ಡಿಸಿಎಂ ಆಗಿದ್ದರು. ೫೦:೫೦ ಸೈಟ್ ಹಂಚಿಕೆ ಮಾಡುವಂತೆ ಕೇಳಿದಾಗ ಸಿದ್ಧರಾಮಯ್ಯ ಸಿಎಂ ಆಗಿದ್ದರು ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು.

ದಿನಾಂಕ ೨೫-೧೦-೨೦೨೧ರಲ್ಲಿ ೫೦:೫೦ ನಿವೇಶನ ಹಂಚಿಕೆಗೆ ಮನವಿ ಮಾಡಲಾಗಿದೆ. ಸಿಎಂ ಪುತ್ರ ಇದ್ದಂತ ಮುಡಾ ಸಭೆಯಲ್ಲೇ ಒಪ್ಪಿಗೆ ನೀಡಲಾಗಿದೆ. ದಿನಾಂಕ ೨೫-೧೧-೨೦೨೧ರಂದು ೫೦:೫೦ ಹಕ್ಕು ಬಿಡುಗಡೆ ಮಾಡಲಾಗಿದೆ. ನಂತ್ರ ಸಿಎಂ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಯಾವುದೇ ಜಮೀನು ಕಳೆದುಕೊಳ್ಳದೇ ಸಿಎಂ ಪತ್ನಿಗೆ ಸೈಟ್ ಹಂಚಿಕೆ ಮಾಡಲಾಗಿದೆ ಎಂದರು.

ಈ ಪ್ರಕರಣದ ಸಂಬಂಧ ಮತ್ತಷ್ಟು ವಾದವನ್ನು ಮಾಡುವುದಿದೆ ಎಂಬುದಾಗಿ ನ್ಯಾಯಪೀಠಕ್ಕೆ ಮನವಿ ಮಾಡಿದ್ದರಿಂದ, ಹೈಕೋರ್ಟ್ ಸಿಎಂ ಪ್ರಾಸಿಕ್ಯೂಷನ್ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.೨ಕ್ಕೆ ಮುಂದೂಡಿತು. ಸೆ.೨ರ ಮಧ್ಯಾಹ್ನ ೨.೩೦ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿ, ಮುಂದೂಡಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ತಾತ್ಕಾಲಿಕ ರಿಲೀಫ್ ಅನ್ನು ಹೈಕೋರ್ಟ್ ಮತ್ತೆ ನೀಡಿದೆ.

RELATED ARTICLES
- Advertisment -
Google search engine

Most Popular