ಬೆಂಗಳೂರು: ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ಮುಂದಿನ ಸೋಮವಾರದವರೆಗೂ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಸೆ.೯ಕ್ಕೆ ಮುಂದೂಡಿಕೆಯಾಗಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ೨ನೇ ಬಾರಿಗೆ ಮುಂದೂಡಿಕೆಯಾಗಿದೆ.
ಕಳೆದ ವಿಚಾರಣೆಯಲ್ಲಿ ರಾಜ್ಯಪಾಲರ ಪರವಾಗಿ ವಕೀಲ ತುಷಾರ ಮೆಹ್ತಾ , ಸ್ನೇಹಮಯಿಕೃಷ್ಣ ಪರ ಹಿರಿಯ ವಕೀಲ ಮಣೀಂಧರ್ ಸಿಂಗ್ ಹಾಗೂ ಪ್ರದೀಪ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು. ಸುದೀರ್ಘ ವಾದ ಆಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ (ಸೆ.೨) ಮಧ್ಯಾಹ್ನಕ್ಕೆ ಮುಂದೂಡಿತ್ತು. ಇಂದು ಸೋಮವಾರ ಮತ್ತೆ ಪ್ರತಿವಾದಿಗಳ ಪರ ಕೆಲ ವಕೀಲರಿಂದ ವಾದ ಮಂಡನೆ ಮಾಡಲಾಯಿತು. ಬಳಿಕ ಕೋರ್ಟ್ ವಿಚಾರಣೆಯನ್ನ ಮುಂದೂಡಿದೆ.