Sunday, April 20, 2025
Google search engine

Homeರಾಜ್ಯಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.

ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೇಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೇಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

ಭಾರತ್ ರೈಸ್‌ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ.

ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ.

ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್‌ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್‌ ರೈಸ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

RELATED ARTICLES
- Advertisment -
Google search engine

Most Popular