Sunday, April 20, 2025
Google search engine

Homeರಾಜ್ಯಸುದ್ದಿಜಾಲಆನ್‍ಲೈನ್‍ನಲ್ಲಿ ವ್ಯವಹರಿಸುವಾಗ ಎಚ್ಚರಿಕೆ: ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್.ಎನ್ ಹೊಸಮನೆ

ಆನ್‍ಲೈನ್‍ನಲ್ಲಿ ವ್ಯವಹರಿಸುವಾಗ ಎಚ್ಚರಿಕೆ: ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್.ಎನ್ ಹೊಸಮನೆ

ಬಳ್ಳಾರಿ: ಸಾರ್ವಜನಿಕರು ಇಂದಿನ ಡಿಜಿಟಲ್ ಯುಗದಲ್ಲಿ ವ್ಯವಹರಿಸುವಾಗ ಬಹಳ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಕಿವಿಮಾತು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕೋಟೆ ಮುಖ್ಯ ರಸ್ತೆಯ ಶ್ರೀಮೇದಾ ಪದವಿಪೂರ್ವ ವಿದ್ಯಾಲಯದ ಆಡಿಟೋರಿಯಮ್ ಸಭಾಂಗಣದಲ್ಲಿ “ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರ ಯುಗದಲ್ಲಿ ಗ್ರಾಹಕರ ರಕ್ಷಣೆ” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಔದ್ಯೋಗಿಕರಣದ ನಂತರ ಬಂದಿರುವ ಪ್ರಸ್ತುತ ಡಿಜಿಟಲ್ ಯುಗದಲ್ಲಿ ಜನರು ಬಹುತೇಕ ಆನ್‍ಲೈನ್‍ನಲ್ಲಿಯೇ ವ್ಯವಹರಿಸುವುದು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಮೋಸ ಕೂಡ ಹೋಗುತ್ತಿದ್ದಾರೆ. ಆದ್ದರಿಂದ ಗ್ರಾಹಕರು ಆನ್‍ಲೈನ್‍ನಲ್ಲಿ ವ್ಯವಹರಿಸುವಾಗ ಬಹಳ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಈ ಹಿಂದೆ ಸಾಮಾನ್ಯವಾಗಿ ಜೇಬುಗಳರನ್ನು ಕೇಳಿರುತ್ತಿದ್ದೆವು ಹಾಗೂ ನೋಡಿತ್ತಿದ್ದೇವು; ಆದರೆ ಈಗ ಪ್ರಸ್ತುತ ದಿನಮಾನಗಳಲ್ಲಿ ಆನ್‍ಲೈನ್ ಕಳ್ಳರು ಹೆಚ್ಚಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಆನ್‍ಲೈನ್‍ನಲ್ಲಿ ಯಾವುದೇ ಗುರುತು ಪರಿಚಯವಿಲ್ಲದ ಅನಾಮಧೇಯ ವ್ಯಕ್ತಿಗಳಿಗೆ ಗ್ರಾಹಕರು ತಮ್ಮ ಬ್ಯಾಂಕ್ ಖಾತೆ ಮಾಹಿತಿ, ಓಟಿಪಿ ಸೇರಿದಂತೆ ಇತರೆ ಯಾವುದೇ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಕಾನೂನು ಮಾಪನ ಶಾಸ್ತ್ರದ ಸಹಾಯಕ ನಿಯಂತ್ರಕರಾದ ಅಮೃತಾ ಪಿ.ಚವ್ಹಾಣ, ಜಿಲ್ಲಾ ಪರಿವೀಕ್ಷಣಾ ಘಟಕದ ಜಿಲ್ಲಾ ಅಂಕಿತಾಧಿಕಾರಿ ಡಾ.ಪ್ರಕಾಶ್ ಎಸ್.ಪುಣ್ಯಶೆಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸಕೀನ, ಶ್ರೀಮೇಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮ್ ಕಿರಣ್, ಸಂಡೂರು ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಪ್ರಾಧಿಕಾರದ ಅಧಿಕಾರಿ ಅಂಬಾದಾಸ್, ಬಳ್ಳಾರಿ ಬಾರ್ ಕೌನ್ಸಿಲ್‍ನ ಕಾರ್ಯದರ್ಶಿ ರವೀಂದ್ರ ಸೇರಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶ್ರೀಮೇಧಾ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ ಗ್ರಾಹಕರಿಗೆ 2011ರ ಏಪ್ರೀಲ್ 1ರಿಂದ ಜಾರಿಗೆ ಬಂದಿರುವ ಲೀಗಲ್ ಮೆಟ್ರಾಲಜಿ ಕಾಯ್ದೆ -2009ರ ಹಾಗೂ ಸಾಮಾಗ್ರಿ ನಿಯಮಗಳ 2011ರ ತಿಳುವಳಿಕೆ ಮತ್ತು ಗ್ರಾಹಕ ಜಾಗೃತಿ ನೀಡುವ ಕಾರ್ಯಾಗಾರ ಆಯೋಜಿಸಲಾಗಿತ್ತು.

RELATED ARTICLES
- Advertisment -
Google search engine

Most Popular