Sunday, April 20, 2025
Google search engine

HomeUncategorizedಜಲ್​ ಪೈಗುರಿ ಜಿಲ್ಲೆಯಲ್ಲಿ ಭೀಕರ ಬಿರುಗಾಳಿ: ಐವರ ಸಾವು, 500ಕ್ಕೂ ಹೆಚ್ಚು ಮಂದಿಗೆ ಗಾಯ

ಜಲ್​ ಪೈಗುರಿ ಜಿಲ್ಲೆಯಲ್ಲಿ ಭೀಕರ ಬಿರುಗಾಳಿ: ಐವರ ಸಾವು, 500ಕ್ಕೂ ಹೆಚ್ಚು ಮಂದಿಗೆ ಗಾಯ

ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲ್​ ಪೈಗುರಿ ಜಿಲ್ಲೆಯಲ್ಲಿ ಭಾನುವಾರ ಭೀಕರ ಬಿರುಗಾಳಿಯ ಪ್ರಭಾವದಿಂದ ಹಲವಾರು ಮನೆಗಳು ಮತ್ತು ಮರಗಳು ನೆಲಸಮಗೊಂಡಿವೆ. ಐದು ಮಂದಿ ಮೃತಪಟ್ಟಿದ್ದು, 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಲ್​​ಪೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಪತ್ತು ಸಂಭವಿಸಿದೆ. ಇದರ ಪರಿಣಾಮವಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ ಮತ್ತು ಐವರು ಮೃತಪಟ್ಟಿದ್ದಾರೆ. ಪ್ರಸ್ತುತ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಅಧಿಕಾರಿಗಳು ಸಕ್ರಿಯರಾಗಿದ್ದು ಅಗತ್ಯ ನೆರವು ನೀಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಸಂತ್ರಸ್ತರ ನೆರವಿಗೆ ಸರ್ಕಾರ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ.

ಜಲ್​ಪೈಗುರಿ-ಮೈನಾಗುರಿ ಪ್ರದೇಶಗಳಲ್ಲಿ ಮಧ್ಯಾಹ್ನ ಹಠಾತ್ ಭಾರಿ ಮಳೆ ಮತ್ತು ಬಿರುಗಾಳಿ ಗಾಳಿಯಿಂದ ಜೀವಹಾನಿ, ಮನೆ ಹಾನಿ, ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಅನಾಹುತ ಸಂಭವಿಸಿದೆ ಎಂದು ತಿಳಿದು ಬೇಸರವಾಯಿತು. ಜಿಲ್ಲಾ ಮತ್ತು ಬ್ಲಾಕ್ ಆಡಳಿತ, ಪೊಲೀಸ್, ಡಿಎಂಜಿ ಮತ್ತು ಕ್ಯೂಆರ್‌ ಟಿ ತಂಡಗಳು ವಿಪತ್ತು ನಿರ್ವಹಣಾ ಕಾರ್ಯಾಚರಣೆಗಳಲ್ಲಿ ತೊಡಗಿವೆ ಮತ್ತು ಪರಿಹಾರವನ್ನು ಒದಗಿಸುತ್ತವೆ ಎಂದು ಭಾನುವಾರ ಮಮತಾ ಬ್ಯಾನರ್ಜಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದರು.

ಸೂಕ್ತ ನೆರವಿಗೆ ಪ್ರಧಾನಿ ಮೋದಿ ಸೂಚನೆ

ಪಶ್ಚಿಮ ಬಂಗಾಳದ ಜಲ್​ಪೈಗುರಿ-ಮೈನಗುರಿ ಪ್ರದೇಶಗಳಲ್ಲಿ ಬಿರುಗಾಳಿಯಿಂದ ಹಾನಿಗೊಳಗಾಗಿರುವುದನ್ನು ಕೇಳಿ ಬೇಸರವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಅಧಿಕಾರಿಗಳೊಂದಿಗೆ ಮಾತನಾಡಿ, ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ಸೂಕ್ತ ನೆರವು ನೀಡುವಂತೆ ತಿಳಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES
- Advertisment -
Google search engine

Most Popular