Sunday, April 20, 2025
Google search engine

Homeವಿದೇಶಪಾಕಿಸ್ತಾನದ ಬಂದರಿನಲ್ಲಿ ಉಗ್ರರ ದಾಳಿ: 7 ಕಾರ್ಮಿಕರ ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದ ಬಂದರಿನಲ್ಲಿ ಉಗ್ರರ ದಾಳಿ: 7 ಕಾರ್ಮಿಕರ ಗುಂಡಿಕ್ಕಿ ಹತ್ಯೆ

ಪಾಕಿಸ್ತಾನ:. ಗ್ವಾದರ್‌ ನ ಸರಬಂದ್‌ ನಲ್ಲಿರುವ ಫಿಶ್ ಹಾರ್ಬರ್ ಜೆಟ್ಟಿ ಬಳಿಯ ವಸತಿ ಕ್ವಾರ್ಟರ್ಸ್​​ ಗಳ ಮೇಲೆ ಭಯೋತ್ಪಾದಕರು ದಾಳಿ ನಡೆದಿದ್ದು, 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮಲಗಿದ್ದ ಏಳು ಮಂದಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಇತ್ತೀಚೆಗೆ ಸೆಂಟರ್ ಫಾರ್ ರಿಸರ್ಚ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ವಾರ್ಷಿಕ ಭದ್ರತಾ ವರದಿಯನ್ನು ಬಿಡುಗಡೆ ಮಾಡಲಾಗಿದೆ.

ಈ ವರದಿಯ ಪ್ರಕಾರ, 2023 ರಲ್ಲಿ ಪಾಕಿಸ್ತಾನದಲ್ಲಿ 789 ಭಯೋತ್ಪಾದಕ ದಾಳಿಗಳು ನಡೆದಿವೆ. ಈ ದಾಳಿಯಲ್ಲಿ 1,524 ಜನರು ಸಾವನ್ನಪ್ಪಿದ್ದಾರೆ ಮತ್ತು 1,463 ಜನರು ಗಾಯಗೊಂಡಿದ್ದಾರೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಧಿಕ ದಾಖಲೆಯಾಗಿದೆ.

RELATED ARTICLES
- Advertisment -
Google search engine

Most Popular