Monday, May 5, 2025
Google search engine

HomeUncategorizedರಾಷ್ಟ್ರೀಯಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ: 5 ಬಾಂಬ್‌ಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ: 5 ಬಾಂಬ್‌ಗಳು ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು ಅತಿದೊಡ್ಡ ದುರಂತವನ್ನು ತಪ್ಪಿಸಿದೆ.

ಪೂಂಚ್‌ನ ಸುರನ್‌ಕೋಟ್ ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಭದ್ರತಾ ಪಡೆಯು ಅಡಗುತಾಣದಲ್ಲಿ ಪತ್ತೆಯಾದ ಸಂಹವನ ಉಪಕರಣವನ್ನು ವಶಕ್ಕೆ ಪಡೆದಿದೆ. ಕಳೆದ ಕೆಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಭಯೋತ್ಪಾದಕ ಕೇಂದ್ರಬಿಂದುವಾಗಿದೆ.

ಭಯೋತ್ಪಾದಕರ ಈ ಅಡಗುತಾಣವನ್ನು ಪತ್ತೆ ಹಚ್ಚುವ ಮೂಲಕ ಸೇನೆಯು ಅತಿದೊಡ್ಡ ದುರಂತವನ್ನೇ ತಪ್ಪಿಸಿದೆ. ಅಲ್ಲದೇ ಪಹಲ್ಗಾಮ್ ದಾಳಿಯ ಬಳಿಕ ಉಗ್ರರು ಜಮ್ಮು ಕಾಶ್ಮೀರದಲ್ಲಿ ಮತ್ತೆ ದಾಳಿಗೆ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ.

RELATED ARTICLES
- Advertisment -
Google search engine

Most Popular