ಮಂಗಳೂರು (ದಕ್ಷಿಣ ಕನ್ನಡ):ಮಂಗಳೂರಿನ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜೇಶ ಎಂದು ಗುರುತಿಸಲಾಗಿದೆ. ಕಾಸರಗೋಡಿನಲ್ಲಿ ಎಎಸ್ಐ ಓಂ ದಾಸ್ ಹಾಗೂ ಹೆಚ್ ಸಿ ಮಚ್ಚೆಂದ್ರನಾಥ್ ರವರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 14 ದಿನಗಳ ತನಕ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿರಿಸಲಾಗಿದೆ.