Sunday, April 6, 2025
Google search engine

Homeಅಪರಾಧಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 135 ವರ್ಷ ಜೈಲು ಶಿಕ್ಷೆ

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 135 ವರ್ಷ ಜೈಲು ಶಿಕ್ಷೆ

ಅಲಪ್ಪುಳ (ಕೇರಳ): ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಕೇರಳ ನ್ಯಾಯಾಲಯವು  135 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಆರೋಪಿಯು ಎರಡು ವರ್ಷಗಳ ಹಿಂದೆ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಸಂಬಂಧಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ.

ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಎಫ್‌ ಟಿಎಸ್‌ ಸಿ) ನ್ಯಾಯಾಧೀಶರಾದ ಸಜಿ ಕುಮಾರ್ ತೀರ್ಪು ಪ್ರಕಟಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಐಪಿಸಿ, ಐಟಿ ಕಾಯ್ದೆ, ಬಾಲಾಪರಾಧಿ ನ್ಯಾಯಾಂಗ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳ ಅಡಿಯಲ್ಲಿ ಆರೋಪಿಗೆ 135 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದಾರೆ.

ನ್ಯಾಯಾಲಯವು ಆರೋಪಿಗೆ ಗರಿಷ್ಠ ಜೈಲು ಶಿಕ್ಷೆಯ ಜೊತೆಗೆ 5.1 ಲಕ್ಷ ರೂ. ದಂಡ ವಿಧಿಸಿದ್ದು. ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

RELATED ARTICLES
- Advertisment -
Google search engine

Most Popular