ಬೆಂಗಳೂರು: ನಟ ಪುನೀತ್ ರಾಜಕುಮಾರ್ ಅವರು ಅಗಲಿ ಮೂರು ವರ್ಷ ಉರಳಿದೆ, ಮಂಗಳವಾರ (ಅಕ್ಟೋಬರ್ 29) ಪುನೀತ್ ರವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಮಗಳು ವಂದಿತ, ನಟ ರಾಘವೇಂದ್ರ ರಾಜಕುಮಾರ್ ದಂಪತಿ ಸೇರಿದಂತೆ ಕುಟುಂಬದ ಸದಸ್ಯರು ಇಲ್ಲಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು
ಪೂಜೆ ಸಲ್ಲಿಸಿದ ಬಳಿಕ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ವಂದಿತ ಅವರು ಪುನೀತ್ ಅವರ ನೆಚ್ಚಿನ ತಿಂಡಿ, ಸಿಹಿ ತಿನಿಸುಗಳನ್ನು ಎಡೆ ಇಟ್ಟರು.
ನಟ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದು ಪುಷ್ಪನಮನ ಸಲ್ಲಿಸಿದ್ದಾರೆ. 2021ರ ಅಕ್ಟೋಬರ್ 29ರಂದು ನಟ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು.