ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರನ್ನು ಐದು ಜಿಲ್ಲೆಗಳಾಗಿ ವಿಭಜಿಸುವ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇಂದು ಮಂಗಳವಾರ ವಿಧಾನ ಸಭೆಯಲ್ಲಿ ಮಂಡನಡಯಾಗಲಿದೆ.
ಬೆಂಗಳೂರನ್ನು ೫ ವಿಭಾಗಗಳಾಗಿ ವಿಭಜಿಸುವ ವಿಧೇಯಕ ಇದಾಗಿದೆ. ಬೆಂಗಳೂರನ್ನು ವಿಭಜಿಸಿ, ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ಸಲಹೆಗೆ ಅನುಮೋದನೆ ನೀಡಲಾಗಿದೆ. ಈ ಕರಡು ಮಸೂದೆಯಲ್ಲಿ ಸುಮಾರು ೪೦೦ ವಾರ್ಡ್ ಗಳ ರಚನೆಗೆ ಪ್ರಸ್ತಾಪ ಮಾಡಲಾಗಿದೆ. ಈ ಕರಡು ಮಸೂದೆಯಂತೆ ಬಿಡಿಎ ಅದರ ಯೋಜನೆ ರೂಪಿಸುವ ಅಧಿಕಾರ ಕಳೆದುಕೊಳ್ಳಲಿದೆ. ಆದರೆ ಬೃಹತ್ ಮೂಲಸೌಕರ್ಯ ಯೋಜನೆಗಳ ಕಾಮಗಾರಿಯನ್ನ ಬಿಡಿಎ ಕೈಗೊಳ್ಳಲಿದೆ.
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ೫-೧೦ ಕಾರ್ಪೋರೇಷನ್ ಇರಲಿದೆ. ಒಂದೊಂದು ಕಾರ್ಪೋರೇಷನ್ ಗೆ ಒಬ್ಬ ಆಯುಕ್ತ ಇರಲಿದ್ದಾರೆ. ಜಲಮಂಡಳಿ, ಬಿಡಿಎ, ಬೆಸ್ಕಾಂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರಲಿದೆ. ಪೂರ್ವ, ಪಶ್ಚಿಮ, ದಕ್ಷಿಣ, ಉತ್ತರ, ಕೇಂದ್ರ ಸೇರಿದಂತೆ ಇನ್ನಷ್ಟು ಬಿಬಿಎಂಪಿ ಆಗಿ ವಿಂಗಡಣೆ ಮಾಡಲಾಗುತ್ತದೆ.
ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ರಾಮನಗರ, ಕನಕಪುರ, ಆನೆಕಲ್, ಬೆಂಗಳೂರು ಗ್ರಾಮಾಂತರ ಪ್ರದೇಶಗಳು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರಲಿದ. ದಿ ಗ್ರೇಟರ್ ಬೆಂಗಳೂರು ಗೌವರ್ನೆನ್ಸ್ ಬಿಲ್ ೨೦೨೪ ಗೆ ಕ್ಯಾಬಿನೆಟ್ ಅನುಮೋದನೆ ಸಿಕ್ಕಿದ್ದಯ, ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ವಿವಿಧ ಹಂತದಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲಾಗುತ್ತದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಸಿಟಿ ಕಾರ್ಪೊರೇಷನ್ ಗಳು ಬರಲಿದೆ