Friday, April 18, 2025
Google search engine

Homeರಾಜ್ಯಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್ ತರಬೇತಿಗೆ ಸಚಿವ ಸಂಪುಟ ಸಭೆ ಅಸ್ತು

ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್ ತರಬೇತಿಗೆ ಸಚಿವ ಸಂಪುಟ ಸಭೆ ಅಸ್ತು

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಅಂದಾಜು ೨೫ ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ, ಸಿಇಟಿ ತರಬೇತಿ ಯೋಜನೆಯನ್ನು ೧೨.೫೦ ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಅನುಮೋದನೆಗೊಂಡ ಇತರ ವಿಷಯಗಳು
ಹತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮಮೊಗ್ರಫಿ, ನಾಲ್ಕು ಆಸ್ಪತ್ರೆಗಳಲ್ಲಿ ಕೋಲ್ಪೋಸ್ಕೋಪಿ ಉಪಕರಣಗಳನ್ನು ೧೦ ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿ, ಗುಡ್ಡದ ಚೆನ್ನೆನಹಳ್ಳಿ ಗ್ರಾಮಗಳ ಹಾಗೂ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕು, ನರಸಪುರ ಹೋಬಳಿ, ಚಕ್ರಸಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಒಟ್ಟು ೧೧೧ ಎಕರೆ ೧೭ ಗುಂಟೆ ಜಮೀನಿನಲ್ಲಿ ಅನುಪಾತದ ಪಾಲುದಾರಿಕೆಯಡಿಯಲ್ಲಿ ಕರ್ನಾಟಕ ಗೃಹ ಮಂಡಳಿಯು ವಸತಿ ಯೋಜನೆಯನ್ನು (ಬಿಎಂಆರ್‌ಡಿಎ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಶೇ ೫೦:೫೦ ಹಾಗೂ ಉಳಿದ ಪ್ರದೇಶಗಳಲ್ಲಿ ಶೇ ೬೦:೪೦) ೨೮೨.೧೬ ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿ, ತೈಲಗೆರೆ ಗ್ರಾಮದ ಸರ್ವೆ ನಂಬರ್‌ಗಳಲ್ಲಿ ಒಟ್ಟು ೨೭ ಎಕರೆ ೨ ಗುಂಟೆ ಜಮೀನುಗಳಲ್ಲಿ ಶೇ ೫೦:೫೦ ಅನುಪಾತದ ಪಾಲುದಾರಿಕೆಯಡಿ ಕರ್ನಾಟಕ ಗೃಹ ಮಂಡಳಿಯು ೫೬.೮೦ ಅಂದಾಜು ಮೊತ್ತದಲ್ಲಿ ವಸತಿ ಯೋಜನೆ ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular