ಮೈಸೂರು: ಮೈಸೂರಿನ ಬೋಗಾದಿ ಬಡಾವಣೆ ಬಳಿ ನಿಯಂತ್ರಣ ತಪ್ಪಿ ಕಾರೊಂದು ಉರುಳಿ ಬಿದ್ದಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ವಿಚಾರ ತಿಳಿದು ಸಕಾಲಕ್ಕೆ ಸ್ಥಳಕ್ಕೆ 108 ಆಂಬುಲೆನ್ಸ್ ನ ಧರಣೇಶ್ ಹಾಗೂ ಚಾಲಕ ಸುರೇಂದ್ರನಾಥ್ ಆಗಮಿಸಿದ್ದು, ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳಾದ ರಾಘವನ್ ಹಾಗೂ ನಿಶ್ಚಲ್ ಸಾಯಿ ಎಂಬುವರನ್ನು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಗಿದೆ.
ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗ್ಗಿದ್ದು, ಮೂರು ವಿದ್ಯುತ್ ಕಂಬಗಳು ಜಖಂ ಗೊಂಡಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು , ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.