Sunday, April 20, 2025
Google search engine

Homeರಾಜ್ಯಮತ್ತೆ ಮುನ್ನೆಲೆಗೆ ಬಂದ ಕೆರಗೋಡು ಹನುಮ ಧ್ವಜ ತೆರವು ಹೋರಾಟದ ಪ್ರಕರಣ: ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ...

ಮತ್ತೆ ಮುನ್ನೆಲೆಗೆ ಬಂದ ಕೆರಗೋಡು ಹನುಮ ಧ್ವಜ ತೆರವು ಹೋರಾಟದ ಪ್ರಕರಣ: ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ನೋಟಿಸ್

ಮಂಡ್ಯ: ಕೆರಗೋಡು ಹನುಮ ಧ್ವಜ ತೆರವು ಹೋರಾಟದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ರೌಡಿ ಶೀಟ್ ತೆರೆಯುವ ಬಗ್ಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ನೋಟೀಸ್ ನೀಡಿರುವ ಪೊಲೀಸರ ವಿರುದ್ಧ ವಕೀಲರು ಹಾಗೂ ಹಿಂದೂ ಕಾರ್ಯಕರ್ತರಿಂದ ಮಂಡ್ಯದ ಕೆರಗೋಡು ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.

ವಿವಾದಿತ ಧ್ವಜ ಸ್ತಂಭದಿಂದ ಪೊಲೀಸ್ ಠಾಣೆಗೆ ಮೆರವಣಿಗೆ ಮಾಡಲು ಸಿದ್ದತೆ ಮಾಡಲಾಗಿದೆ.

ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಹೋರಾಟ ಹತ್ತಿಕ್ಕಲು ಮುಂದಾಗಿದೆ. ಪೊಲೀಸರ ಮೂಲಕ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸದ್ಯ ಮೂವರು ಹಿಂದೂ ಕಾರ್ಯಕರ್ತರಿಗೆ ಪೊಲೀಸರು ನೋಟೀಸ್ ನೀಡಿದ್ದು, ವಿಹೆಚ್ ಪಿ ಮೈಸೂರು ಭಾಗದ ಸಹಕಾರ್ಯದರ್ಶಿ ಚಿಕ್ಕಬಳ್ಳಿ ಬಾಲು, ಕಾರ್ತಿಕ್, ಹರೀಶ್ ಗೆ ನೋಟೀಸ್ ನೀಡಲಾಗಿದೆ.

ಧ್ವಜ ಸ್ಥಂಭ ವಿಚಾರದಲ್ಲಿ ಅನ್ಯ ಕೋಮಿನ ಜನರನ್ನ ಬೆದರಿಸಿ ನಿಂದನೆ ಮಾಡಲಾಗಿದೆ. ಗಲಭೆಗೆ ಪ್ರಚೋದನೆ ಆರೋಪದಡಿ ಕಲಂ 143, 341, 353, 149 ಸೆಕ್ಷನ್ ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಹಾಗಾಗಿ ಏಕೆ ನಿಮ್ಮ ಮೇಲೆ ರೌಡಿ ಶೀಟರ್ ತೆರೆಯಬಾರದು ಎಂದು ಕೆರಗೋಡು ಠಾಣೆ ಪೊಲೀಸರು ಮೇ 4ರಂದು ನೋಟೀಸ್ ನೀಡಿದ್ದಾರೆ. 7 ದಿನಗಳ ಒಳಗೆ ನೋಟೀಸ್ ಗೆ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular