Friday, April 4, 2025
Google search engine

Homeರಾಜ್ಯಸುದ್ದಿಜಾಲಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು (ದಕ್ಷಿಣ ಕನ್ನಡ): ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು. ಇನ್ನು‌ ಮಂಗಳೂರಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED ARTICLES
- Advertisment -
Google search engine

Most Popular