Friday, April 11, 2025
Google search engine

Homeರಾಜ್ಯನಾನು ಕೊಟ್ಟ ಜಾತಿಗಣತಿ ವರದಿ ನೈಜ, ವೈಜ್ಞಾನಿಕವಾಗಿದೆ: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು

ನಾನು ಕೊಟ್ಟ ಜಾತಿಗಣತಿ ವರದಿ ನೈಜ, ವೈಜ್ಞಾನಿಕವಾಗಿದೆ: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು

ಬೆಂಗಳೂರು: ನಾನು ಕೊಟ್ಟ ಜಾತಿಗಣತಿ ವರದಿ ನೈಜವಾಗಿದೆ, ವೈಜ್ಞಾನಿಕವಾಗಿಯೇ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗ ಕೊತೆ ಮಾತನಾಡಿದ ಕಾಂತರಾಜು, ಜಾತಿಗಣತಿ ವರದಿ ನೋಡದೇ ವರದಿ ಅವೈಜ್ಞಾನಿಕ ಎನ್ನುವುದು ಸರಿಯಲ್ಲ. 40 ದಿನ ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಲಾಗಿದೆ. ಜಾತಿ, ಲಿಂಗ, ಧರ್ಮ, ಅಸ್ತಿ-ಪಾಸ್ತಿ ಎಲ್ಲವೂ ಸೇರಿ ‌55 ಪ್ರಶ್ನೆ ಕೇಳಿದ್ದೇವೆ. ಕೂಲಂಕಷವಾಗಿ ಅಂಕಿ ಅಂಶಗಳ ಸಮೇತ ವರದಿ ಸಿದ್ಧ ಮಾಡಲಾಗಿದ್ದು, ರಾಜ್ಯ ಸರ್ಕಾರ ವರದಿ ನೋಡಿದ ಬಳಿಕ ಮುಂದಿನ ತೀರ್ಮಾನ ಮಾಡಲಿ ಎಂದರು.

ಒಕ್ಕಲಿಗರು, ಲಿಂಗಾಯತ ಸಮುದಾಯ ವರದಿಗೆ ವಿರೋಧ ಮಾಡುತ್ತಿವೆ. ವರದಿ ನೋಡಿ ಮೇಲೆ ತಪ್ಪು ಇದ್ದರೆ ನಾನು ಒಪ್ಪಿಕೊಳ್ಳುತ್ತೇನೆ, ಜಾತಿಗಣತಿ ವರದಿಗೆ ಕಾರ್ಯದರ್ಶಿ ಸಹಿ ಇಲ್ಲ ಎನ್ನುವುದು ಸರಿಯಲ್ಲ. ವರದಿಯ ಒಂದು ವಾಲ್ಯೂಮ್​ಗೆ ಕಾರ್ಯದರ್ಶಿ ಸಹಿ ಹಾಕಿಲ್ಲ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಇನ್ನು ಜಾತಿ ಗಣತಿ ವರದಿ ಕಾಣೆಯಾಗಿದೆ ಎಂದು ಹರಿದಾಡುತ್ತಿರುವ ಸುದ್ದಿ ಬಗ್ಗೆ ಮಾತನಾಡಿರುವ ಕಾಂತರಾಜು, ಮೂಲ ಪ್ರತಿ ಕಾಣೆಯಾಗಿದೆ ಎನ್ನುವುದು ನನಗೆ ಗೊತ್ತಿಲ್ಲ. 2019ರಲ್ಲಿ ನಾನು ವರದಿ ಕೊಟ್ಟಿದ್ದು, ನಾನು ಇದ್ದಾಗ ಮೂಲಪ್ರತಿ ಇತ್ತು. ಇದು ಜಾತಿಗಣತಿ ಅಲ್ಲ, ಸಾಮಾಜಿಕ ಹಾಗೂ ಶೈಕ್ಷಣಿಕ ವರದಿ ಎಂದು ಹೇಳಿದರು.

ಯಾರು ಬೇಕಾದರೂ ಅಭಿಪ್ರಾಯ ಹೇಳಬಹುದು. ರಿಜೆಕ್ಟ್ ಮಾಡಿ ಅಂತ ಹೇಳಬಹುದು. ಆದರೆ ಮೊದಲು ವರದಿ ನೋಡಲಿ ಅಮೇಲೆ ಯಾರು ಏನು ಬೇಕಾದರು ಹೇಳಲಿ. ನೋಡದೇ ವರದಿ ಸರಿ ಇಲ್ಲ ಎನ್ನುವುದು ಸರಿಯಲ್ಲ. ಕುಮಾರಸ್ವಾಮಿ ಅವಧಿಯಲ್ಲಿ ವರದಿ ನೀಡಲು ಅಪಾಯಿಂಟ್ ಮೆಂಟ್ ಕೇಳಿದ್ದೆವು. ಆದ್ರೆ, ಅವರು ನಮಗೆ ಸಮಯ ಕೊಟ್ಟಿರಿಲಿಲ್ಲ ಎಂದರು.

RELATED ARTICLES
- Advertisment -
Google search engine

Most Popular