Friday, April 11, 2025
Google search engine

HomeUncategorizedರಾಷ್ಟ್ರೀಯಪೌರತ್ವ ತಿದ್ದುಪಡಿ ಕಾಯ್ದೆ(CAA) ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ!

ಪೌರತ್ವ ತಿದ್ದುಪಡಿ ಕಾಯ್ದೆ(CAA) ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ: ನೆರೆ ರಾಷ್ಟ್ರಗಳ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡುವ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಲು ಕೇಂದ್ರ ಸರ್ಕಾರ ಇಂದು (ಸೋಮವಾರ) ಸಂಜೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಆದ್ರೆ, ಇತ್ತೀಚೆಗೆ ಸಿಎಎ ಜಾರಿಗೊಳಿಸುವುದಾಗಿ ಅಮಿತ್ ಶಾ ಪುನರುಚ್ಚರಿಸಿದ್ದರು. ಇದರಂತೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಿಎಎ ಅಧಿಸೂಚನೆ ಹೊರಡಿಸಲಾಗಿದೆ.

2019ರ ಡಿಸೆಂಬರ್ 11ರಂದು ಸಂಸತ್​ನಲ್ಲಿ ಸಿಎಎ ಅಂಗೀಕಾರಗೊಂಡಿತ್ತು. ಇದೀಗ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಬಿದ್ದಿದ್ದು, 2014ರ ಡಿ.31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದವರಿಗೆ ನಿಯಮ ಅನ್ವಯವಾಗುತ್ತದೆ. ಈ ಮೊದಲು 11 ವರ್ಷ ಭಾರತದಲ್ಲೇ ನೆಲೆಸಿದವರಿಗೆ ಅವಕಾಶವಿತ್ತು. ಆದ್ರೆ, ಈಗ ತಿದ್ದುಪಡಿ ಮಾಡಿ 11 ವರ್ಷದಿಂದ ಈಗ 5 ವರ್ಷಕ್ಕೆ ಇಳಿಸಲಾಗಿದ್ದು, ಮುಸ್ಲಿಮೇತರ ವ್ಯಕ್ತಿಗಳು 6 ವರ್ಷ ಕಾಲ ಅಥವಾ ಅದಕ್ಕೂ ಮೇಲ್ಪಟ್ಟು ಭಾರತದಲ್ಲೇ ವಾಸ ಮಾಡಿದ್ದರೆ ಅಂಥವರಿಗೆ ಪೌರತ್ವ ನೀಡಲಾಗುತ್ತದೆ. ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್​, ಪಾರ್ಸಿಗಳಿಗೆ ಪೌರತ್ವ ನೀಡಲಾಗುತ್ತದೆ.

ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಶಾಹೀನ್ ಬಾಗ್ ಸೇರಿ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಯಾಕಂದ್ರೆ, ಸಿಎಎ ಜಾರಿಗೊಳಿಸುವ ಸಂಬಂಧ ಈ ಹಿಂದೆ ದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಇದರಿಂದ ಇದೀಗ ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ.

2019ರಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿತ್ತು. ಪ್ರತಿಪಕ್ಷಗಳು ಈ ಕಾಯ್ದೆಯನ್ನು ವಿರೋಧಿಸಿತ್ತು. ಅಲ್ಲದೇ ಭಾರತದಲ್ಲಿನ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳಲಾಗುತ್ತದೆ ಅನ್ನೋ ಉಹಾಪೋಹಗಳು ಈ ಕಾಯ್ದೆ ಜೊತೆಗೆ ಹಬ್ಬಿತ್ತು. ಹೀಗಾಗಿ ಭಾರಿ ಪ್ರತಿಭಟನೆಗಳು ದೇಶಾದ್ಯಂತ ನಡೆದಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆದರೆ ಭಾರತದಲ್ಲಿನ ಮುಸ್ಲಿಮರ ಅಥವಾ ಇನ್ಯಾವುದೇ ಸಮುದಾಯದ ನಾಗರೀತರ ಪೌರತ್ವಕ್ಕೆ ಈ ಕಾಯ್ದೆಯಿಂದ ಧಕ್ಕೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಪ್ಟಪಡಿಸಿತ್ತು.

ಪ್ರಮುಖವಾಗಿ ಈ ಕಾಯ್ದೆಯಡಿ ಬಾಂಗ್ಲಾದೇಶ, ಪಾಕಿಸ್ತಾನ, ಆಫ್ಗಾನಿಸ್ತಾನದಿಂದ ಭಾರತಕ್ಕೆ 2014ರ ಡಿಸೆಂಬರ್ 31ಕ್ಕಿಂತ ಮೊದಲು ಆಗಮಿಸಿ ನೆಲೆಸಿದವರಿಗೆ ಭಾರತದ ಪೌರತ್ವ ನೀಡುವ ಕುರಿತಾಗಿದೆ. ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಹಾಗೂ ಕ್ರಿಶ್ಚಿಯನ್ನ ಈ ಮೂರು ದೇಶಗಳಲ್ಲಿ ನಡೆದ ನರಮೇಧ, ದೌರ್ಜನ್ಯಗಳಿಂದ ತಪ್ಪಿಸಿಕೊಂಡು ಭಾರತಕ್ಕೆ ಬಂದು ನೆಲೆಸಿದವರಿಗೆ ಪೌರತ್ವ ನೀಡುವ ಕುರಿತು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯಲ್ಲಿ ಉಲ್ಲೇಖಿಸಿರುವ ಅಂಶ, ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡುವುದಾಗಿದೆ.

RELATED ARTICLES
- Advertisment -
Google search engine

Most Popular