Thursday, July 2, 2026
Google search engine

Homeರಾಜಕೀಯಪಕ್ಷದಲ್ಲಿ ಗೊಂದಲ ಮುಗಿದಿದೆ ; ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ : ಬಿವೈ ವಿಜಯೇಂದ್ರ

ಪಕ್ಷದಲ್ಲಿ ಗೊಂದಲ ಮುಗಿದಿದೆ ; ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ : ಬಿವೈ ವಿಜಯೇಂದ್ರ

ಮೈಸೂರು : ಬಿಜೆಪಿ ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊಂಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಕ್ರಾಸ್ ವೋಟಿಂಗ್ ಸೇರಿದಂತೆ ಎಲ್ಲಾ ಪ್ರಮುಖ ಬೆಳವಣಿಗೆಗಳ ಕುರಿತು ದೆಹಲಿಯ ವರಿಷ್ಠರಿಗೆ ಸಮಗ್ರ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಮತ್ತೆ ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರದ್ದು ಎಂದು ಹೇಳಲಾದ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಆ ಧ್ವನಿ ತಮ್ಮದಲ್ಲ ಎಂದು ಸ್ವತಃ ಸದಾನಂದಗೌಡರೇ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು. ಶಾಸಕ ಎಸ್.ಆರ್. ವಿಶ್ವನಾಥ್ ಅವರ ಜೊತೆಗೆ ಸಹ ಈ ಬಗ್ಗೆ ಚರ್ಚಿಸಲಾಗಿದೆ. ದೊಡ್ಡ ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸರ್ಕಾರ ತನ್ನ ನಿಲುವಿನಲ್ಲಿ ಹಠಮಾರಿ ಧೋರಣೆ ತಳೆದಿದೆ ಎಂದು ಆರೋಪಿಸಿದ ಅವರು, ಶೇ.79ರಷ್ಟು ಸ್ಥಳೀಯ ರೈತರ ವಿರೋಧ ಇದ್ದರೂ ಸರ್ಕಾರ ಯಾವುದೇ ವಿರೋಧವಿಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.

ಇನ್ನೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಕ್ಕೆ ಬಂದ ದಿನದಿಂದಲೇ ಈ ಯೋಜನೆಗೆ ತೀವ್ರ ಆಸಕ್ತಿ ತೋರಿಸುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, ಮುಂಬರುವ ಜಂಟಿ ಅಧಿವೇಶನದಲ್ಲಿ ಬಿಜೆಪಿ ಈ ವಿಷಯವನ್ನು ಗಂಭೀರವಾಗಿ ಕೈಗೆತ್ತಿಕೊಳ್ಳಲಿದೆ ಎಂದು ಹೇಳಿದರು. ರೈತರ ಪರವಾಗಿ ಸರ್ಕಾರದ ವಿರುದ್ಧ ವಿಸ್ತೃತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

RELATED ARTICLES
- Advertisment -
Google search engine

Most Popular