Wednesday, April 16, 2025
Google search engine

Homeರಾಜ್ಯಸುದ್ದಿಜಾಲಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶದ ಸಮಸ್ಯೆಗಳಿಗೆ ಔಷಧೀಯ ಗ್ರಂಥ: ಸ್ಪೀಕರ್ ಯು.ಟಿ.ಖಾದರ್

ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶದ ಸಮಸ್ಯೆಗಳಿಗೆ ಔಷಧೀಯ ಗ್ರಂಥ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು (ದಕ್ಷಿಣ ಕನ್ನಡ): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಲಾದ ಸಂವಿಧಾನ ದೇಶದ ಎಲ್ಲಾ ಸಮಸ್ಯೆಗಳಿಗೂ ಔಷಧೀಯ ಗ್ರಂಥ. ಸಂವಿಧಾನದ ಆಶಯಕ್ಕೆ ಪೂರಕವಾಗಿ ಆಡಳಿತ ನಡೆಸುವ ಮೂಲಕ ಜನರಿಗೆ ನೆಮ್ಮದಿಯ ವಾತಾವರಣ ನೀಡುವುದು ಸರಕಾರಗಳ ಕರ್ತವ್ಯ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಅವರು ಮಂಗಳೂರು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮನಪಾ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ರ 134ನೆ ಜನ್ಮ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ನಿಲಯಗಳಲ್ಲಿ ಶಿಕ್ಷಮ ಪಡೆದು 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಾಗೂ 2024-25ನೆ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಮಂಜೂರಾತಿ ಪತ್ರವನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೊಂಕಣಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಪಂ ಸಿಇಒ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಎಸ್ಪಿ ಯತೀಶ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular