Friday, April 4, 2025
Google search engine

Homeರಾಜ್ಯಸುದ್ದಿಜಾಲಚಾಮರಾಜನಗರದ ಪ್ರಸಿದ್ದ ಸಿದ್ದಪ್ಪಾಜಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಡಳಿತ ಆದೇಶ

ಚಾಮರಾಜನಗರದ ಪ್ರಸಿದ್ದ ಸಿದ್ದಪ್ಪಾಜಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಡಳಿತ ಆದೇಶ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆ ಅತ್ಯಂತ ಪ್ರಸಿದ್ಧವಾಗಿದ್ದು, ಈ ಒಂದು ಚಿಕ್ಕಲ್ಲೂರು ಜಾತ್ರೆಯ ಸಿದ್ದಪ್ಪಾಜಿ ಯವರ ಜಾತ್ರೆ ಪ್ರತಿ ವರ್ಷ ಅತ್ಯಂತ ವಿಜ್ರಂಭಣೆಯಿಂದ ನಡೆಯುತ್ತಿದ್ದು,ಕಳೆದ ಹಲವು ವರ್ಷಗಳಿಂದ ಇಲ್ಲಿ ಪ್ರಾಣಿ ಬಲಿ ನೀಡುವ ಪದ್ಧತಿ ಇತ್ತು. ಆದರೆ ಈ ಬಾರಿ ಚಾಮರಾಜನಗರದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಾಣಿ, ಪಕ್ಷಿ ಬಲಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ 5 ದಿನಗಳ ಕಾಲ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆ ನಡೆಯಲಿದೆ. ಈ ಬಾರಿ ದೇವಸ್ಥಾನದ ಆವರಣ ಗ್ರಾಮದ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದೆ. ಪ್ರಾಣಿ ಬಲಿ ನಿಶದಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಟ್ಯಾಟೂ & ಹಚ್ಚೆ ಹಾಕಿಸ್ಕೊಳ್ಳೋದಕ್ಕೂ ಜಿಲ್ಲಾಡಳಿತ ಇದೀಗ ಬ್ರೇಕ್ ಹಾಕಿದೆ. ಲಕ್ಷಾಂತರ ಭಕ್ತರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಸೇರುತ್ತಾರೆ.

ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ಅನ್ವಯ ಜ. 13 ರಿಂದ 17ರ ಮಧ್ಯರಾತ್ರಿಯವರೆಗೆ ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ನೀಡುವುದನ್ನು ಮತ್ತು ಮಾರಕಾಸ್ತ್ರಗಳನ್ನು ತರುವುದನ್ನು ತಡೆಗಟ್ಟಲು ಹಾಗೂ ಇದರೊಂದಿಗೆ ಹೈಕೋರ್ಟ್ ನಿರ್ದೇಶನದಂತೆ ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ.

ಜೊತೆಗೆ, ಪ್ರಾಣಿ ಬಲಿ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು, ಪ್ರಾಣಿಬಲಿ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ ಕ್ರಮ ಕೈಗೊಳ್ಳುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಘಟನೆಗಳು ಸಂಭವಿಸಿದರೆ ತಕ್ಷಣ ಆದೇಶಗಳನ್ನು ಮಾಡುವ ಸಲುವಾಗಿ ಕೊಳ್ಳೇಗಾಲ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಅವರೊಂದಿಗೆ ಇನ್ನಿತರ ಅಧಿಕಾರಿಗಳನ್ನು ಹೆಚ್ಚುವರಿ ಸೆಕ್ಟರ್ ಅಧಿಕಾರಿಗಳನ್ನು ವಿವಿಧ ಪ್ರದೇಶದ ಸ್ಥಳಗಳಿಗೆ ನಿಯೋಜಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular