Thursday, April 17, 2025
Google search engine

Homeರಾಜ್ಯ2023-24ನೇ ಸಾಲಿಗೆ ಜಿಲ್ಲಾ ವಾರ್ಷಿಕ ಸಾಲ ಯೋಜನೆ ರೂ.4504 ಕೋಟಿ ಗುರಿ ನಿಗದಿ

2023-24ನೇ ಸಾಲಿಗೆ ಜಿಲ್ಲಾ ವಾರ್ಷಿಕ ಸಾಲ ಯೋಜನೆ ರೂ.4504 ಕೋಟಿ ಗುರಿ ನಿಗದಿ

ಮಡಿಕೇರಿ : ಜಿಲ್ಲಾ ಅಗ್ರಣೀ ಬ್ಯಾಂಕ್ 2023-24 ನೇ ಸಾಲಿನ ಕೊಡಗು ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶೇಷ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದ ನಂತರ ಬ್ಯಾಂಕರುಗಳನ್ನು ಉದ್ದೇಶಿಸಿ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜನಸಾಮಾನ್ಯರಿಗೆ ಅಗತ್ಯವಿರುವ ಸಾಲ ವಿತರಿಸುವುದರ ಮೂಲಕ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಸಮರ್ಪಕವಾಗಿ ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಸಲಹೆ ನೀಡಿದರು. ಈ ಬಾರಿಯ ವಾರ್ಷಿಕ ಸಾಲ ಯೋಜನೆಯು ಜಿಲ್ಲೆಯ ಕೃಷಿಕರಿಗೆ ವರದಾನವಾಗಲಿದೆ ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯಸ್ಥರಾದ ಗಂಗಾಧರ್ ನಾಯ್ಕ್ ಅವರು ಮಾತನಾಡಿ 2023-24 ನೇ ಸಾಲಿಗೆ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ವಯ ರೂ.4504 ಕೋಟಿ ಗುರಿ ನಿಗದಿಪಡಿಸಿದ್ದು, ಅದರಲ್ಲಿ 71.56 ಪ್ರತಿಶತ(ರೂ. 3223.95 ಕೋಟಿ) ಆದ್ಯತಾ ವಲಯಕ್ಕೆ ಮೀಸಲಿಟ್ಟಿದ್ದು ಅವುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ರೂ.2400.56 ಕೋಟಿ, ಕಿರು ಮತ್ತು ಮಧ್ಯಮ ಗಾತ್ರದ ಉದ್ಯಮ ಕ್ಷೇತ್ರಕ್ಕೆ ರೂ.689.83 ಕೋಟಿ ಮತ್ತು ಇತರೆ ಆದ್ಯತಾ ವಲಯಕ್ಕೆ ರೂ.133.56 ಕೋಟಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ಬ್ಯಾಂಕುಗಳು ಜನರಿಗೆ ಸಾಲ ವಿತರಿಸುವುದರ ಮೂಲಕ ನಿಗದಿಪಡಿಸಿರುವ ಗುರಿಯನ್ನು ಸಾಧಿಸಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಪ್ರತಿವರ್ಷದಂತೆ ಈ ವರ್ಷವೂ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ವಾರ್ಷಿಕ ಸಾಲ ಯೋಜನೆ ಬಿಡುಗಡೆ ಮಾಡಲಾಗಿದ್ದು, ಈ ಕ್ರಿಯಾಯೋಜನೆಯು ನಬಾರ್ಡ್ ಸಂಸ್ಥೆಯು ಇತ್ತೀಚೆಗೆ ಬಿಡುಗಡೆ ಮಾಡಿದ ಸಾಮಥ್ರ್ಯ ಆಧಾರಿತ ಸಾಲ ಯೋಜನೆಯ ನೆರವನ್ನು ಪಡೆದು ಬ್ಯಾಂಕುಗಳ ವಲಯವಾರು ಹಂಚಿಕೆವಾರು ಜೊತೆಗೆ, ಹಿಂದಿನ ವರ್ಷದ ಆಯಾಯ ಬ್ಯಾಂಕುಗಳ ಸಾಧನೆಯನ್ನು ಮಾನದಂಡವಾಗಿಟ್ಟುಕೊಂಡು ವಾರ್ಷಿಕ ಸಾಲ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರಲ್ಲದೆ ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿರುವುದರಿಂದ ಕೃಷಿ ಮತ್ತು ಆದ್ಯತಾ ವಲಯಕ್ಕೆ ಒತ್ತು ನೀಡುವ ಉದ್ದೇಶದಿಂದ ಗುರಿಯನ್ನು ನಿಗದಿಪಡಿಸಲಾಗಿದೆ ಎಂಬುದು ಘೋಷ ವಾಕ್ಯವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿ ತನು ನಂಜಪ್ಪ, ನಬಾರ್ಡ್‍ನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕರಾದ ರಮೇಶ್ ಬಾಬು, ವಿವಿಧ ಬ್ಯಾಂಕುಗಳ ಕ್ಷೇತ್ರೀಯ ಕಾರ್ಯಾಲಯದ ಪ್ರತಿನಿಧಿಗಳು, ಬ್ಯಾಂಕುಗಳ ಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರ

RELATED ARTICLES
- Advertisment -
Google search engine

Most Popular