Sunday, April 20, 2025
Google search engine

Homeರಾಜ್ಯಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಮಂಗಳೂರು (ದಕ್ಷಿಣ ಕನ್ನಡ): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಓಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಈ ಕಾರು ತಿಂಗಳಾಡಿಯಿಂದ ರೆಂಜಲಾಡಿಗೆ ತೆರಳುತ್ತಿತ್ತು. ವಾಹನ ಹತೋಟಿ ಕಳೆದುಕೊಂಡು ರಸ್ತೆಯಿಂದ ೧ ಮೀಟರ್ ದೂರದಲ್ಲಿದ್ದ ಚರಂಡಿಗೆ ಉರುಳಿದೆ. ವಾಹನ ಉರುಳಿಬಿದ್ದ ಸಮೀಪದಲ್ಲೆ ವಿದ್ಯುತ್ ಕಂಬವಿತ್ತು. ಅದಕ್ಕೆ ಢಿಕ್ಕಿ ಹೊಡೆಯುತ್ತಿದ್ರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಸ್ಥಳೀಯರ ನೆರವಿನಿಂದ ಕ್ರೇನ್ ಸಹಾಯದಿಂದ ಆಮ್ನಿಯನ್ನು ಮೇಲಕ್ಕೆತ್ತಲಾಯಿತು. ವಾಹನ ಸಂಪೂರ್ಣ ಜಖಂಗೊಂಡಿದೆ.

RELATED ARTICLES
- Advertisment -
Google search engine

Most Popular