ರಾಮನಗರ: ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಜ್ಞಾನವಿಕಾಸ್ ಇನ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಿಡದಿ ಮತ್ತು ದೈಹಿಕ ಶಿಕ್ಷಣ ನಿರ್ದೇಶನಾಲಯದ ಸಹಯೋಗದೊಂದಿಗೆ ನ. ೧೭ರಂದು ನಡೆದ ೨೦೨೩-೨೪ನೇ ಸಾಲಿನ ಮಹಿಳಾ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ತಂಡಕ್ಕೆ ಪ್ರಥಮ ಅತ್ಯುತ್ತಮ ತಂಡ ಪ್ರಶಸ್ತಿ ಲಭಿಸಿದೆ.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಸೌಮ್ಯ ಎ.ಎಂ.ಹಾಗೂ ಶ್ವೇತ ಕೆ. ಅವರುಬೆಂಗಳೂರು ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆಯಾಗಿದ್ದು, ಮುಂದಿನ ತಿಂಗಳು ಚೆನೈನಲ್ಲಿ ನಡೆಯುವ ದಕ್ಷಿಣ ಭಾರತ ವಿಶ್ವವಿದ್ಯಾಲಯಗಳ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.