ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ ೨೦೨೩ -೨೪ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಮಂಡಳಿಯು ನಾಳೆ ಮಾರ್ಚ್ ೩೦ರಂದು ಬೆಳಗ್ಗೆ ೧೧ ಗಂಟೆಗೆ ಪ್ರಕಟಿಸಲಿದೆ.
ಮಂಡಳಿಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕಾಲೇಜಿನಲ್ಲಿಯೂ ಮಾರ್ಚ್ ೩೦ರಂದೇ ಫಲಿತಾಂಶ ನೋಡಬಹುದಾಗಿದೆ. ರೋಲ್ ನಂಬರ್ ಆಧರಿಸಿ ಫಲಿತಾಂಶಗಳನ್ನು ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲ ವಿದ್ಯಾರ್ಥಿಗಳು ವೀಕ್ಷಣೆ ಮಾಡಲು ಅವಕಾಶವಿದೆ.
ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ ೧೨ ರಿಂದ ೨೭ ರವರೆಗೆ ನಡೆಸಿತ್ತು. ಕರ್ನಾಟಕದಲ್ಲಿ ಏಕಕಾಲಕ್ಕೆ ಪ್ರಥಮ ಪಿಯುಸಿಯ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸಿದ್ದರು. ಇದೀಗ, ಮಾರ್ಚ್ ೩೦ರಂದು ಫಲಿತಾಂಶ ಪ್ರಕಟವಾಗಲಿದೆ. ಅನುತ್ತೀರ್ಣರಾದವರಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಗುತ್ತದೆ.
ಪರೀಕ್ಷೆಗಳ ಮೌಲ್ಯಮಾಪನ ಮುಗಿದಿದ್ದು, ಫಲಿತಾಂಶ ಪ್ರಕಟ ಮಾಡಲು ಮಂಡಳಿ ಮುಂದಾಗಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿಯೇ ಫಲಿತಾಂಶಗಳು ಲಭ್ಯವಾಗಲಿದ್ದು, ಮಾರ್ಚ್ ೩೦ರಂದು ಮೊಬೈಲ್ ಮೂಲಕ ಇಲ್ಲವೇ ಇಂಟರ್‌ನೆಟ್ ಸೆಂಟರ್‌ಗಳು ಇಲ್ಲವೇ ಮನೆಯಲ್ಲಿಯೇ ಕುಳಿತು ನೆಟ್‌ನಲ್ಲಿ ವೀಕ್ಷಿಸಲು ಅವಕಾಶವಿದೆ.
karresults.nic.inನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಭರ್ತಿ ಮಾಡಿ ನಿಮ್ಮ ಪ್ರಥಮ ಪಿಯುಸಿ ಫಲಿತಾಂಶ ೨೦೨೪ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.