ನವದೆಹಲಿ: ೧೮ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಸೋಮವಾರ ಪ್ರಾರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಏಪ್ರಿಲ್-ಜೂನ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ನಂತರ ಇದು ಮೊದಲ ಲೋಕಸಭಾ ಅಧಿವೇಶನವಾಗಿದೆ. ೧೮ ನೇ ಲೋಕಸಭೆಯಲ್ಲಿ ಎನ್ಡಿಎ ೨೯೩ ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ. ಬಿಜೆಪಿ ೨೪೦ ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸ್ ೯೯ ಸ್ಥಾನಗಳನ್ನು ಹೊಂದಿದೆ.
ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾದ ಹಿರಿಯ ಸದಸ್ಯ ಭತೃಹರಿಗೆ ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸುತ್ತಾರೆ.