Friday, September 26, 2025
Google search engine

Homeಸ್ಥಳೀಯಮೈಸೂರಿನಲ್ಲಿ ಇಂದು 10.30ಕ್ಕೆ ಸಾಹಿತಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಮೈಸೂರಿನಲ್ಲಿ ಇಂದು 10.30ಕ್ಕೆ ಸಾಹಿತಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಮೈಸೂರು: ಇಂದು ಬೆಳಗ್ಗೆ 10.30ಕ್ಕೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

ಡಾ.ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮೈಸೂರಿಗೆ ತರಲಾಗಿದ್ದು, ನಗರದ ಕಲಾ ಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಜೆಎಸ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ ಎಂದಿದೆ.

ಹಿರಿಯ ಸಾಹಿತಿ ಹಾಗೂ ಪದ್ಮಭೂಷಣ ಪುರಸ್ಕೃತ ಡಾ.ಎಸ್ಎಲ್ ಭೈರಪ್ಪ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

RELATED ARTICLES
- Advertisment -
Google search engine

Most Popular