Tuesday, December 16, 2025
Google search engine

Homeಅಪರಾಧಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದ ತಂಡ ಅಂದರ್

ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದ ತಂಡ ಅಂದರ್

ಬೆಂಗಳೂರಿನಿಂದ ಮಾದಕ ವಸ್ತು (MDMA)ವನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದಂತಹ ತಂಡವನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದೆ.
ಬಂಧಿತರನ್ನು ಅಹಮ್ಮದ್ ಶಾಬೀತ್, ಮಹಮ್ಮದ್ ಶಂಶೀರ್ ಹಾಗೂ ನೌಶೀನ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ
90 ಗ್ರಾಂ MDMA ಮಾದಕ ವಸ್ತು, ಬಿಳಿ ಬಣ್ಣದ ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಹಮ್ಮದ್ ಶಾಬೀತ್ ಎಂಬುವನು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವಾದ MDMA ಯನ್ನು ತಂದು ಸರಬರಾಜು ಮಾಡುತ್ತಿದ್ದ. ಅಲ್ಲದೇ ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ಮಹಿಳೆಯಾದ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುವಾದ MDMA ಯನ್ನು ಸಾಗಾಟ ಮಾಡುತ್ತಿರುವುದ್ದನ್ನು, ಮಂಗಳೂರು ನಗರದ ಸಿಸಿಬಿ ಘಟಕದ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ, ಈ ತಂಡವನ್ನು ಈ ದಿನ ದಸ್ತಗಿರಿ ಮಾಡಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿತರಿಗೆ ನ್ಯಾಯಾಂಗ ಬಂಧನವಾಗಿದೆ. ತನಿಖೆ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular