Monday, April 21, 2025
Google search engine

HomeUncategorizedರಾಷ್ಟ್ರೀಯಪತ್ನಿ, ಇಬ್ಬರು ಮಕ್ಕಳಿಗೆ ಗುಂಡಿಟ್ಟು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಜಿಲ್ಲಾಧಿಕಾರಿಯ ಗನ್ ಮ್ಯಾನ್

ಪತ್ನಿ, ಇಬ್ಬರು ಮಕ್ಕಳಿಗೆ ಗುಂಡಿಟ್ಟು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಜಿಲ್ಲಾಧಿಕಾರಿಯ ಗನ್ ಮ್ಯಾನ್

ಸಿದ್ದಿಪೇಟೆ (ತೆಲಂಗಾಣ): ಜಿಲ್ಲಾಧಿಕಾರಿಯ ಗನ್ ಮ್ಯಾನ್​ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಗುಂಡಿಟ್ಟು, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ನಡೆದಿದೆ.

ಅಕುಲಾ ನರೇಶ್, ಈತನ ಪತ್ನಿ ಚೈತನ್ಯಾ ಹಾಗೂ ಓರ್ವ ಪುತ್ರಿ, ಪುತ್ರ ಮೃತರು.

ಮೃತ ಅಕುಲಾ ನರೇಶ್, ಸಿದ್ದಿಪೇಟೆಯ ಜಿಲ್ಲಾಧಿಕಾರಿ ಪ್ರಶಾಂತ್ ಜೀವನ್ ಪಾಟೀಲ್ ಅವರ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಚಿನ್ನಕೋಡೂರು ಮಂಡಲದ ನಿವಾಸಿಯಾದ ಇವರು ಶುಕ್ರವಾರ ಕರ್ತವ್ಯಕ್ಕೆ ಹೋಗದೆ ಮನೆಯಲ್ಲೇ ಇದ್ದರು. ಈ ವೇಳೆ, ತಮ್ಮ ಸರ್ವೀಸ್ ಪಿಸ್ತೂಲ್ ​​ನಿಂದ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ಗುಂಡು ಹಾರಿಸಿ ಸಾಯಿಸಿದ್ದಾರೆ. ಬಳಿಕ ತಾನೂ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ನರೇಶ್​ ಕರ್ತವ್ಯಕ್ಕೆ ಬಾರದೆ ಇದ್ದುದರಿಂದ ಅನುಮಾನಗೊಂಡ ಸಿಬ್ಬಂದಿ ಮನೆಗೆ ಭೇಟಿ ನೀಡಿದ್ದಾರೆ. ಆಗ ಮನೆಯಲ್ಲಿ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿವೆ. ಅಂತೆಯೇ, ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸದ್ಯ ನರೇಶ್ ಫೋನ್ ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular