Saturday, April 19, 2025
Google search engine

Homeಅಪರಾಧಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಕೊಡಗು : ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ.

ಶಿಲ್ಪ (೩೬)ಮೃತಪಟ್ಟ ದುರ್ದೈವಿ. ಶಿಲ್ಪ ಪತಿ ನಾಯಕಂಡ ಬೋಪಣ್ಣ (೪೫) ಎಂಬಾತನಿಂದ ಈ ಕೃತ್ಯ ನಡೆದಿದೆ.
ಪತ್ನಿಯೊಂದು ಕೊಲೆ ಮಾಡಿದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹತ್ಯೆಗೆಕಾರಣವೆಂದು ತಿಳಿದುಬಂದಿಲ್ಲ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ನಡೆಸುತ್ತಿದ್ದಾರೆ. ಈ ಹತ್ಯೆಗೆ ಬೆಟೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

RELATED ARTICLES
- Advertisment -
Google search engine

Most Popular