Sunday, April 6, 2025
Google search engine

Homeರಾಜ್ಯಕಾನೂನು ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡಗೂ ಒಂದೇ: ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ಕಾನೂನು ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡಗೂ ಒಂದೇ: ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡನಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ವಿನಯ್ ಸೋಮಯ್ಯಡೆತ್‌ನೋಟ್‌ನಲ್ಲಿ ಪೊನ್ನಣ್ಣ, ಮಂಥರ್ ಗೌಡ ಹೆಸರು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದರು. ಕಾನೂನು ಎಲ್ಲರಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ. ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳುತ್ತದೆ. ಸಿಬಿಐಗೆ ನೀಡುವ ವಿಚಾರದ ಬಗ್ಗೆ ನಿರ್ಧಾರ ಇಲ್ಲ. ಅಗತ್ಯವಿದ್ದರೆ ನೋಡೋಣ ಎಂದರು.

ಈ ಹಿಂದೆ ಫೆಬ್ರವರಿಯಲ್ಲಿ ನಡೆದಿರುವ ಘಟನೆಯಿಂದ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ತನಿಖೆ ಮಾಡಲಾಗುತ್ತದೆ. ವಾಟ್ಸಪ್‌ನಲ್ಲಿ ಹಾಕಿರುವ ಸಂದೇಶದ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಮಡಿಕೇರಿಯಲ್ಲೂ ಎಫ್‌ಐಆರ್ ಆಗಿದೆ. ಇಲ್ಲೂ ಎಫ್‌ಐಆರ್ ಆಗಿದೆ. ಎಲ್ಲವೂ ಸಮಗ್ರ ತನಿಖೆ ಆಗುತ್ತದೆ. ತನಿಖೆ ಆದಮೇಲೆ ಇವರಿಬ್ಬರೂ, ವಿನಯ್ ಆತ್ಮಹತ್ಯೆಗೆ ಕಾರಣರಾಗಿದ್ರಾ ಎಂದು ತಿಳಿದುಬಂದ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿಕೆ ನೀಡಿದರು.

ಡೆತ್‌ನೋಟ್ ಎನ್ನುವುದೇ ಇಲ್ಲ ಎಂದು ಹೇಳುತ್ತಾರೆ. ವಾಟ್ಸಪ್‌ನಲ್ಲಿ ಅವರು ಮಾಡಿದ್ದಾರೆ ಎಂದು ಮೊದಲು ಸಾಬೀತು ಆಗಬೇಕಲ್ಲ. ಡೆತ್‌ನೋಟ್ ಅಥವಾ ವಾಟ್ಸಪ್ ಡೆತ್‌ನೋಟ್ ಎಂದು ತಗೆದುಕೊಳ್ಳಬಹುದಾ ಎಂದು ಗೊಂದಲವಿದೆ. ಇದರಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡೋಕೆ ಅವಕಾಶ ಇಲ್ಲ. ಒಂದು ವೇಳೆ ನಿರ್ಲಕ್ಷ್ಯ ಮಾಡಿದರೆ ಅವರ ಮೇಲೆ ಕ್ರಮ ಆಗುತ್ತದೆ. ಹಾಗಾಗಿ ಸಂಪೂರ್ಣ ತನಿಖೆ ಮಾಡಿ ವರದಿ ಕೊಡಬೇಕು ಎಂದು ನಾನು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಶಾಸಕರ ಹೆಸರು ಹೇಳಿದ ಕೂಡಲೇ ಅದನ್ನ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ವಾಟ್ಸಪ್ ಅನ್ನು ಪರಿಶೀಲನೆ ಮಾಡಿದಾಗ ಏನಾದರು ಪಾತ್ರ ಇದೆ ಎಂದು ಕಂಡರೆ ಕ್ರಮ ತಗೆದುಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಬಿಜೆಪಿಯವರು ಎಲ್ಲವನ್ನೂ ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾರೆ. ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಫೆಬ್ರವರಿಯಲ್ಲಿ ಆಗಿರುವ ಘಟನೆ ಅವರು ಸತ್ತ ಮೇಲೆ ಬೆಳಕಿಗೆ ಬಂದಿದೆ. ಅದರ ತನಿಖೆಯಾದರೂ ಆಗಬೇಕಲ್ಲ. ಅದಕ್ಕೂ ರಾಜಕಾರಣ ಬೆರೆಸುವುದು ಸರಿ ಕಾಣಿಸಲ್ಲ ಎಂದು ಕಿಡಿಕಾರಿದರು.

RELATED ARTICLES
- Advertisment -
Google search engine

Most Popular