ಗುಂಡ್ಲುಪೇಟೆ: ತಾಲ್ಲೂಕಿನ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿರುವ ಸೆಂಟ್‌ಜಾನ್ ಶಾಲೆಯ ಸಮೀಪ ದುಷ್ಕರ್ಮಿಗಳು ಬೊಲೆರೋ ಕಾರಿನಲ್ಲಿ ಬಂದು ವ್ಯಕ್ತಿಯೊಬ್ಬರ ಮೃತದೇಹವನ್ನು ರಸ್ತೆಬದಿ ಎಸೆದು ಹೋಗಿರುವ ಘಟನೆ ನಡೆದಿದೆ.
ಕೊಲೆಯಾಗಿರುವ ರೀತಿಯಲ್ಲಿ ಮೃತಪಟ್ಟ ವ್ಯಕ್ತಿಯ ಶವ ಸಿಕ್ಕಿದ್ದು, ಈತ ಊಟಿ ಮೂಲದ ದೇವರಾಜು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಕವಿತಾ, ಡಿವೈಎಸ್ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು.
ಎಸ್ಪಿ ಕಾರ್ಯವೈಖರಿಗೆ ಮೆಚ್ಚುಗೆ: ಚಾಮರಾಜನಗರ ಎಸ್ಪಿ ಡಾ.ಕವಿತಾ ಬಂದಾಗಿಂದ ಜಿಲ್ಲೆಯ ಯಾವ ತಾಲ್ಲೂಕು, ಗ್ರಾಮ ಮಟ್ಟದಲ್ಲಿ ಅಪಘಾತವಾಗಲಿ, ಕಳ್ಳತನ ನಡೆಯಲಿ, ಹೆದ್ದಾರಿ ದರೋಡೆಯಾಗಲಿ ತಕ್ಷಣ ಮಹಿಳಾ ಅಧಿಕಾರಿಯಾಗಿ ಎಲ್ಲಾ ಕಡೆ ಪಾದರಸದಂತೆ ಕರ್ತವ್ಯ ನಿರ್ವಹಿಸುತ್ತಿರುವ ಎಸ್ಪಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಕಮೆಂಟ್ ಹಾಗೂ ಪೋಸ್ಟ್ ಹಾಕುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತಿದ್ದಾರೆ.