ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಮುಖ್ಯ ಭೂಮಿಕೆಯಲ್ಲಿರುವ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಅಕ್ಟೋಬರ್ 25 ರಂದು ಬಿಡುಗಡೆಯಾಗಲಿದೆ.
ಚಿತ್ರ ಈಗಾಗಲೇ ವಿವಿಧ ರೀತಿಯಲ್ಲಿ ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದಂತೆ ಪ್ರಚಾರ ಕಾರ್ಯಗಳು ಭರದಿಂದ ಸಾಗಿವೆ.
ಸುದರ್ಶನ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಜತಿನ್ ಪಟೇಲ್ ನಿರ್ಮಿಸಿದ ಈ ಚಿತ್ರವನ್ನು ಕಿರಣ್ ಎಸ್ ಸೂರ್ಯ ನಿರ್ದೇಶಿಸಿದ್ದಾರೆ, ಕಿರಣ್ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಕೂಡ ಬರೆದಿದ್ದಾರೆ.
ಇದೊಂದು ಲವ್ ಕಂ ಥ್ರಿಲ್ಲರ್ ಆಗಿರುವ ಚಿತ್ರ. ವೀಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುವ ಭರವಸೆ ಇದೆ ಎಂದು ನಿರ್ಮಾಪಕರು ಹೇಳಿದ್ದಾರೆ. ಕೊಲೆಯೊಂದರ ಸುತ್ತ ಕಥೆ ಜರುಗುತ್ತದೆ. ಶೀರ್ಷಿಕೆ ಸೂಚಿಸುವಂತೆ, ಕಿರಣ್ ಅವರ ಈ ಹೊಸ ಪ್ರಯತ್ನ ಸಾಂಪ್ರದಾಯಿಕ ಗಡಿಗಳನ್ನು ಧಿಕ್ಕರಿಸುವ ಗುರಿಯನ್ನು ಹೊಂದಿದೆ.
ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ.