Saturday, April 19, 2025
Google search engine

Homeರಾಜ್ಯಇನ್ಮುಂದೆ ದಾಖಲಾಗುವ ಕೇಸ್‌ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ: ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಇನ್ಮುಂದೆ ದಾಖಲಾಗುವ ಕೇಸ್‌ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ: ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಇಂದಿನಿಂದ ೩ ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕಾನೂನುಗಳ ಜಾರಿಗೆ ನಾವು ಒಂದು ಆಪ್ ಮಾಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿಂದು ಮಾತನಾಡಿದ ಡಾ.ಪರಮೇಶ್ವರ್, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್ ಗಳಿಗೆ ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್ ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ ಎಂದರು.

RELATED ARTICLES
- Advertisment -
Google search engine

Most Popular