ಮಂಡ್ಯ: ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಶ್ರೀ ಡಾ.ಕರಿ ವೃಷಭ ದೇಶಿಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.
ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ದೇವಿಯ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ಡಾ.ಕರಿ ವೃಷಭ ದೇಶಿಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ, ನೊಣವಿನಕೆರೆಯ ಶ್ರೀ ಕಾಡಾಸಿದ್ದೇಶ್ವರದ ಸ್ವಾಮೀಜಿಗಳು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಸರ್ಕಾರ ಮೀಸಲಾತಿ ಪ್ರಕಟಿಸುವುದು ಉತ್ತಮ. ಅದು ಎಲ್ಲರಿಗೂ ಅನುಕೂಲವಾಗಲಿದೆ. ಶ್ರೀಮಠದ ಪರಮ ಭಕ್ತ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ. ಅವರು ಮುಖ್ಯಮಂತ್ರಿ ಆಗಲಿ ಎಂಬುದು ನಮ್ಮ ಆಶೀರ್ವಾದ ಕೂಡ ಇದೆ. ಅವರುಗೆ ನಾವು ಭಗವಂತನಲ್ಲಿ ಸಂಕಲ್ಪ ಕೂಡ ಮಾಡಿದ್ದೇವೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಸ್ವಾಮೀಜಿ ನುಡಿದರು.