ರಾಯಚೂರು : ಮಟನ್ ಊಟ ಸೇವಿಸಿ ನಾಲ್ವರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಂಭೀರವಾಗಿದ್ದ ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ೫ ಕ್ಕೇರಿಕೆಯಾಗಿದೆ.
ಘಟನೆಯಲ್ಲಿ ಭೀಮಣ್ಣ(೬೦), ಈರಮ್ಮ (೫೪), ಮಲ್ಲೇಶ್ (೧೯) ಹಾಗೂ ಪಾರ್ವತಿ (೧೭) ಮೃತಪಟ್ಟಿದ್ದರು. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಮಲ್ಲಮ್ಮ (೨೨) ಎಂದು ಗುರುತಿಲಾಗಿದೆ.