Sunday, April 20, 2025
Google search engine

Homeರಾಜ್ಯಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಚುನಾವಣಾ ಅಕ್ರಮ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ ಸೋಮವಾರ ಅರ್ಜಿ ವಜಾಗೊಳಿಸಿದೆ. ವಿವರವಾದ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಹಿಂದೆ ನಡೆದ ಅರ್ಜಿಯ ವಿಚಾರಣೆ ವೇಳೆ, ಪ್ರಜ್ವಲ್ ಪರ ಹಿರಿಯ ವಕೀಲ ಉದಯಹೊಳ್ಳ, ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಮೇಲ್ಮನವಿ ಸಲ್ಲಿಕೆ ಮಾಡುವವರೆಗೆ ತಡೆಯಾಜ್ಞೆ ನೀಡಲು ಈ ನ್ಯಾಯಾಲಯಕ್ಕೆ ಅವಕಾಶವಿದೆ ಎಂದು ತಿಳಿಸಿ, ಆ ಕುರಿತ ನಿಯಮಗಳು ಮತ್ತು ಇದೇ ಸಂಬಂಧ ಹಲವು ತೀರ್ಪುಗಳೊಂದಿಗೆ ಅರ್ಜಿಯಲ್ಲಿ ವಿವರಿಸಿ, ತಡೆ ನೀಡುವಂತೆ ಮನವಿ ಮಾಡಲಾಗಿತ್ತು.

ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ ಸೆ. ೧ ರಂದು ತೀರ್ಪು ನೀಡಿ, ಅದರ ಪ್ರತಿಯನ್ನು ಸಂಸತ್ ಸ್ಪೀಕರ್‌ಗೆ ಕಳುಹಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತ್ತು. ಸೆಪ್ಟೆಂಬರ್ ೪ರಂದು ಹೈಕೊರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್ ರೇವಣ್ಣ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು. ಈ ಬಗೆಗಿನ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಂತಿಮವಾಗಿ ಪ್ರಜ್ವಲ್ ರೇವಣ್ಣ ಅವರ ಅರ್ಜಿ ವಜಾಗೊಳಿಸಿದೆ.

RELATED ARTICLES
- Advertisment -
Google search engine

Most Popular