Saturday, April 19, 2025
Google search engine

Homeರಾಜ್ಯಸುದ್ದಿಜಾಲಸಮುದಾಯದ ಮೇಲೆ ದೌರ್ಜನ್ಯ ಘಟನೆಗೆ ಪೊಲೀಸ್ ಇಲಾಖೆ ಸದಾ ನಿಮ್ಮೊಂದಿಗಿದೆ: ಪೊಲೀಸ ವರಿಷ್ಠಾಧಿಕಾರಿ ಡಾ.ಬಿ.ಎನ್.ನಂದಿನಿ

ಸಮುದಾಯದ ಮೇಲೆ ದೌರ್ಜನ್ಯ ಘಟನೆಗೆ ಪೊಲೀಸ್ ಇಲಾಖೆ ಸದಾ ನಿಮ್ಮೊಂದಿಗಿದೆ: ಪೊಲೀಸ ವರಿಷ್ಠಾಧಿಕಾರಿ ಡಾ.ಬಿ.ಎನ್.ನಂದಿನಿ

ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಮೇಲೆ ನಡೆಯುವ ದೌರ್ಜನ್ಯ ಇನ್ನಿತರ ಘಟನೆಗಳ ಬಗ್ಗೆ ಪೊಲೀಸ್ ಇಲಾಖೆ ಸದಾ ನಿಮ್ಮೊಂದಿಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಡಾ.ಬಿ.ಎನ್.ನಂದಿನಿ ಹೇಳೀದರು.

ಕೆ.ಆರ್.ನಗರ ಪಟ್ಟಣದ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ಆಗುತ್ತಿರುವ ಘಟನೆಗಳ ಬಗ್ಗೆ ಹೆಚ್ಚು ದೂರು ಕೇಳಿ ಬರುತ್ತಿವೆ ಇದರ ಬಗ್ಗೆ ಹೆಚ್ಚು ನಿಗಾವಸುವಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಜನರಿಗೆ ಕಾನೂನು ಅರಿವು ಮೂಡಿಸುವಂತ ಕಾರ್ಯಕ್ರಮಗಳು ಜರುಗಬೇಕು ಹಾಗೂ ಸಭೆಯಲ್ಲಿ ಭಾಗವಹಿಸಿದ್ದ ಎಸ್.ಸಿ-ಎಸ್.ಟಿ ಸಮಾಜದ ಮುಖಂಡರೊಂದಿಗೆ ಸಾಕಷ್ಟು ವಿಷಯಗಳನ್ನು ಚರ್ಚಿಸಿ ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿ ಆಗುತ್ತಿದ್ದು ಅದರಲ್ಲಿಯೂ ದ್ವಿಚಕ್ರ ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಕಂಡುಬರುತ್ತದೆ ಈಗಾಗಲೇ ಹಲವು ಕಡೆಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ ಮತ್ತು ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದು, ಅತಿ ಹೆಚ್ಚು ಅಪಘಾತ ಆಗುವ ಸ್ಥಳಗಳನ್ನು ಗುರುತಿಸಿ ಸಿ ಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗುವುದು ಎಂದರು.

ದಲಿತ ಸಮಾಜದ ಮುಖಂಡರಾದ ಎಂ.ಎಸ್.ಮಹದೇವ್, ಹಂಪಾಪುರ ಸುರೇಶ್, ದಿವಕಾರ್ ಮಾತನಾಡಿ ಎಸ್.ಸಿ-ಎಸ್.ಟಿ ಸಭೆಯನ್ನು ತಾಲೂಕು ಮಟ್ಟದಲ್ಲಿ ಮಾಡುವುದರ ಜೊತೆಗೆ ಪ್ರತಿ ಹೋಬಳಿ ಮಟ್ಟದಲ್ಲಿ ಪ್ರತಿ ತಿಂಗಳಿಗೊಮ್ಮೆ ಸಭೆಯನ್ನು ಮಾಡಿದರೆ ಜನರಿಗೆ ಕಾನೂನು ಅರಿವು ತಿಳಿಸಿದಂತಾಗುತ್ತದೆ ಎಂದು ಮನವಿ ಮಾಡಿದರು.

ಕೆ.ಆರ್.ನಗರ ಠಾಣಾ ಇನ್ಸ್ಪೆಕ್ಟರ್ ಪಿ.ಪಿ.ಸಂತೋಷ್ ಮಾತನಾಡಿ ಈಗಾಗಲೇ ತಾಲೂಕು ಮಟ್ಟದ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರು ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಕರೆದು ಸಭೆ ನಡೆಸಲಾಗುತ್ತಿದೆ ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಸಭೆಯಲ್ಲಿ ಭಾಗವಹಿಸುವುದೇ ಇರುವುದಕ್ಕೆ ಕಾರಣ ಏನೆಂದು ತಿಳಿಯುತ್ತಿಲ್ಲ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯವಾಗಿರುವುದರಿಂದ ಮುಂದಿನ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯಲ್ಲಿ ಮುಖಂಡರು ಪ್ರತಿ ತಿಂಗಳಿಗೊಮ್ಮೆ ಹೋಬಳಿ ಮಟ್ಟದ ಸಭೆಯನ್ನು ನಡೆಸಲು ಪೊಲೀಸ್ ಇಲಾಖೆ ಸಿದ್ದವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಬ್ ಇನ್ಸ್ಪೆಕ್ಟರ್ ಧನರಾಜ್, ಪುರಸಭಾ ಸದಸ್ಯ ಮಿಕ್ಸರ್ ಶಂಕರ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ದಿವಾಕರ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಶ್ರೀನಿವಾಸ್, ಮಾಜಿ ಗ್ರಾ.ಪಂ ಸದಸ್ಯ ವಿಷಕಂಠ, ಡಿ.ಕೆ.ಕೊಪ್ಪಲು ಗವಿಯಪ್ಪ, ಹೊಸಕೋಟೆ ಚೆಲುವರಾಜ್, ಪೊಲೀಸ್ ಸಿಬ್ಬಂದಿಗಳಾದ ಮಂಜು, ಪರಶುರಾಮ್ ಗೌಡ, ಆಲಿ, ಗನ್ ಮ್ಯಾನ್ ಸಿದ್ದರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular