ತಾಂಡವಪುರ:ವರುಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷರು ಆದ ಡಾಕ್ಟರ್ ಯತಿಂದ್ರ ಸಿದ್ರಾಮಯ್ಯನವರನ್ನು ವಿಧಾನ ಪರಿಷತ್ ಸ್ಥಾನ ನೀಡುವಂತೆ ವರುಣ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ಅವರು ಇಂದು ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕೆಂಪಿ ಸಿದ್ದನ ಹುಂಡಿ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ನಂಜಯ್ಯನವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆ ಚಾಮರಾಜನಗರ ಜಿಲ್ಲೆ ಮಂಡ್ಯ ಜಿಲ್ಲೆ ಸೇರಿದಂತೆ ಮುಂತಾದ ಕಡೆ ಹಗಲು ರಾತ್ರಿ ಏನದೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮ ವಹಿಸಿದ್ದಾರೆ.
ಆದ್ದರಿಂದ ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಿಕೊಂಡು ಅವರಿಗೆ ಇನ್ನೂ ಉನ್ನತ ಮಠದ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮತ್ತು ಬಲವರ್ಧನೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪನವರು, ಕೆ ವೆಂಕಟೇಶ್ ಅವರು ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರನ್ನು ವಿಧಾನಪರಿಷತ್ ಸ್ಥಾನ ನೀಡುವ ಮೂಲಕ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಮುಂದಾಗಬೇಕು ಎಂದು ಕಾಂಗ್ರೆಸ್ ಮುಖಂಡರಾದ ನಂಜಯ್ಯನವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪೌರಕಾರ್ಮಿಕರಾದ ನಂಜುಂಡ ಮುಖಂಡರಾದ ರವಿಚಂದ್ರ, ಕೆಎಸ್ ರವಿ ಮುಂತಾದವರು ಇದ್ದರು.