Friday, April 4, 2025
Google search engine

Homeರಾಜ್ಯಸುದ್ದಿಜಾಲವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ- ಕ್ಷೇತ್ರ ಶಿಕ್ಷಣಾಧಿಕಾರಿ ಕಾಳೀರಯ್ಯ

ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ- ಕ್ಷೇತ್ರ ಶಿಕ್ಷಣಾಧಿಕಾರಿ ಕಾಳೀರಯ್ಯ

ಮದ್ದೂರು : ಸಮಾಜದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಳೀರಯ್ಯ ತಿಳಿಸಿದರು.
ಪಟ್ಟಣದ ಶಿವಪುರದಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಸರ್ವಪಲ್ಲಿ ರಾಧಾಕೃಷ್ಣನ್ ರವರು ತಮ್ಮ ಜನ್ಮ ದಿನವನ್ನು ಶಿಕ್ಷಕರಿಗೆ ಅರ್ಪಿಸಿದರು ಹೀಗಾಗಿ ಅವರ ಜನ್ಮ ದಿನಾಚರಣೆಯನ್ನೇ ಶಿಕ್ಷಕರ ದಿನಾಚರಣೆಯನ್ನಾಗಿ ದೇಶಾದ್ಯoತ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಶಿಕ್ಷಕರು ಸರ್ವಪಲ್ಲಿ ರಾಧಾಕೃಷ್ಣನ್ ರವರ ಆದರ್ಶಗಕನ್ನು ಅನುಸರಿಸಬೇಕು, ವಿದ್ಯಾರ್ಥಿಗಳಿಗೆ ಉತ್ತಮ ಭೋಧನೆಯನ್ನು ಮಾಡುವುದರ ಮೂಲಕ ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಅವರನ್ನು ಉತ್ತಮ ಪ್ರಜೆಯನ್ನಾಗಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ತಾಲ್ಲೂಕಿನ ಹಲವು ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ತಾ ಪಂ ಇ,ಓ ರಾಮಲಿಂಗಯ್ಯ ಉದ್ಘಾಟಿಸಿ ಮಾತನಾಡಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಮಂಗಳಮ್ಮ, ತಾಲ್ಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಅನಂತೆಗೌಡ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ದೇವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ದೇವರಾಜು, ಕಾರ್ಯದರ್ಶಿ ರವಿಚಂದ್ರ, ಖಾಸಗಿ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಅರುಣ್ ಕುಮಾರ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

RELATED ARTICLES
- Advertisment -
Google search engine

Most Popular