Sunday, April 20, 2025
Google search engine

Homeರಾಜ್ಯಸುದ್ದಿಜಾಲಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ - ಡಿ ರವಿಶಂಕರ್

ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ – ಡಿ ರವಿಶಂಕರ್

ಹೊಸೂರು : ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ಶ್ರಮಿಸುವ ಮೂಲಕ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಕಾರಣಕರ್ತರಾಗಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಪುರಸಭೆ ಬಯಲು ರಂಗ ಮಂದಿರದಲ್ಲಿ ನಡೆದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಹಾಗೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ಪ್ರಮುಖವಾದ್ದದ್ದು ಇದನ್ನು ಶಿಕ್ಷಕ ವೃಂದ ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳನ್ನು ಯಾವ ದಿಕ್ಕಿಗೆ ತೆಗೆದುಕೊಂಡು ಹೋಗಬೇಕೆಂಬ ಹೊಣೆಗಾರಿಕೆಯನ್ನು ಬಹಳ ಜವಬ್ದಾರಿಯಿಂದ ನಿರ್ವಹಿಸಬೇಕು ಎಂದು ಮನವಿ ಮಾಡಿದರು. ಕ್ಷೇತ್ರದ ವಿದ್ಯಾರ್ಥಿಗಳು ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಗಣನೀಯ ಸಾಧನೆ ಮಾಡಬೇಕು ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಭೋದನೆ ಮಾಡುವುದರ ಜತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಪರೀಕ್ಷಾರ್ಥಿಗಳಿಗೆ ಉತ್ತಮ ತರಬೇತಿ ನೀಡಬೇಕು ಎಂದು ಸಲಹೆ ನೀಡಿದರು.

ಸರ್ಕಾರಿ ಶಾಲೆಗಳ ಜತೆಗೆ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಸಾಧನೆ ಮಾಡಬೇಕು ಈ ಬಗ್ಗೆ ಆಯಾ ಶಾಲಾ ಆಡಳಿತ ಮಂಡಳಿ ಮತ್ತು ಸಂಬಂಧ ಅಧಿಕಾರಿಗಳು ಗಮನಹರಿಸಬೇಕು ಎಂದು ತಿಳಿಸಿದ ಶಾಸಕರು ಅಂಕ ಗಳಿಕೆಯ ಜತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕಲಿಸಬೇಕು ಎಂದು ಕೋರಿದರು.
ಶಾಲೆ ಕೊಠಡಿಗಳ ದುರಸ್ಥಿಗಾಗಿ ಅನುದಾನ ಮಂಜೂರು ಮಾಡುವಂತೆ ಸದನದಲ್ಲಿ ಸರ್ಕಾರದ ಗಮನ ಸೆಳೆಯಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಶಿಕ್ಷಣ ಸಚಿವರು ಅನುದಾನ ಮಂಜೂರು ಮಾಡಿದ್ದು ಇಲಾಖೆಯವರು ತುರ್ತಾಗಿ ಆಗಬೇಕಾಗಿರುವ ಕಾಮಗಾರಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ನಿವೃತ್ತಿ ಹೊಂದಿರುವ ಸುಮಾರು ೪೦ ಮಂದಿ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು. ಇದರ ಜತೆಗೆ ಪ್ರಶಸ್ತಿ ಪುರಸ್ಕೃತ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರುಗಳನ್ನು ಅಭಿನಂದಿಸಲಾಯಿತು. ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗಾಗಿ ನಡೆದ ಆಟೋಟ ಸ್ಪರ್ದೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸರ್ವೆಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರವನ್ನು ಅಲಂಕೃತಗೊ0ಡ ವಾಹನದಲ್ಲಿ ಕಾಲೇಜು ಮೈದಾನದಿಂದ ಬಯಲು ರಂಗ ಮಂದಿರದ ವರೆಗೆ ಮೆರವಣಿಗೆ ಮಾಡಲಾಯಿತು. ತಹಶೀಲ್ದಾರ್ ಸಿ.ಎಸ್.ಪೂರ್ಣಿಮ, ಬಿಇಒ ಆರ್.ಕೃಷ್ಣಪ್ಪ, ಹಿರಿಯ ಸಾಹಿತಿ ಕಾ.ತ.ಚಿಕ್ಕಣ್ಣ ಮಾತನಾಡಿದರು.
ಜಿ.ಪಂ. ಮಾಜಿ ಸದಸ್ಯ ಜಿ.ಆರ್.ರಾಮೇಗೌಡ, ಪುರಸಭೆ ಸದಸ್ಯರಾದ ಕೋಳಿಪ್ರಕಾಶ್, ಶಿವಕುಮಾರ್, ಶಂಕರ್, ಮಾಜಿ ಸದಸ್ಯ ಕೆ.ವಿನಯ್, ನವ ನಗರ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ.ಅರುಣ್‌ಕುಮಾರ್, ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ನಾಗರಾಜು, ಪದಾಧಿಕಾರಿಗಳಾದ ರಾಜಶೇಖರ್, ಸಿ.ಎನ್.ಸ್ವಾಮಿ, ಮುತ್ತೇಶಚಾರ್, ಮಧುಕುಮಾರ್, ಲಕ್ಷಿಕಾಂತ್, ಬಿ.ವಿ.ಪ್ರಸನ್ನಕುಮಾರ್, ಕುಮಾರೇಗೌಡ, ಜ್ಯೋತಿಕುಮಾರ್, ಸೈಯದ್‌ರಿಜ್ವಾನ್, ಮನೋಹರ್, ಕಮಲ, ಈಶ್ವರ್, ಶಿಕ್ಷಣ ಸಂಯೋಜಕರಾದ ದಾಸಪ್ಪ, ಜಗದೀಶ್ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular